ಜನವರಿ 16ರಂದು ಹೂಡಿ ಜಂಕ್ಷನ್ ಬಳಿ ಕಾರೊಂದನ್ನು ಅಡ್ಡಗಟ್ಟಿ ಮಹಿಳೆಯರು ಮತ್ತು ಮಕ್ಕಳ ಮುಂದೆ ಚಾಕು ಪ್ರದರ್ಶಿಸಿ ಯುವಕನೊಬ್ಬ ಪುಂಡಾಟ ಮೆರೆದಿದ್ದ. ಇನ್ನು 25 ವರ್ಷದ ಆರ್.ಟಿ.ನಗರದ ಬಳಿಯ ಕನಕನಗರ ನಿವಾಸಿ ಮೀನು ಮಾರಾಟಗಾರ ಸೈಯದ್ ಅರ್ಬಾಜ್ ಖಾನ್‌ನನ್ನು ಪೊಲೀಸರು ಆತನ ವಾಹನ ನೋಂದಣಿ ಸಂಖ್ಯೆಯ ಆಧಾರದ ಮೇಲೆ ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಆರೋಪಿ ಈ ಹಿಂದೆಯೂ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಈತ ಸಂಜೆ ಕಾಡುಗೋಡಿ ಬಳಿ ಕಾರಿನಲ್ಲಿ ಹೋಗುತ್ತಿದ್ದ ದಂಪತಿಯ ಜತೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದ. ನಂತರ ದಂಪತಿ ಟ್ರಾಫಿಕ್ ಸಿಗ್ನಲ್‌ನಲ್ಲಿ ಕಾರು ನಿಲ್ಲಿಸಿದ್ದಾಗ ಆರೋಪಿಯು ಬೈಕ್‌ನಿಂದ ಕೆಳಗಿಳಿದು ಬಂದು ನಡು ರಸ್ತೆಯಲ್ಲೆ ದಂಪತಿಯೊಂದಿಗೆ ಗಲಾಟೆ ಮಾಡಿದ್ದ. ಈ ವೇಳೆ ಅರ್ಬಾಜ್ ಖಾನ್, ದಂಪತಿಗೆ ಡ್ಯಾಗರ್ ತೋರಿಸಿ ಸ್ಥಳದಲ್ಲೆ ಅವರನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದು, ಅದರ ದೃಶ್ಯಾವಳಿಗಳು ದಂಪತಿಯ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿತ್ತು. ಇದರ ಬೆನ್ನಲ್ಲೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಬೈಕ್‌ನ ನೋಂದಣಿ ಸಂಖ್ಯೆಯ ಸುಳಿವು ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…