ಜನ ಮನದ ನಾಡಿ ಮಿಡಿತ

Advertisement

ಮಧ್ಯಪ್ರದೇಶ: ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವತಿ!

ಪ್ರೀತಿ ಎಂದ್ರೇನೆ ಹಾಗೆ ಜಾತಿ, ಧರ್ಮ ಎಲ್ಲವನ್ನೂ ಮೀರಿಸುವ ಶಕ್ತಿಯನ್ನು ಹೊಂದಿದೆ. ಇದೀಗ ಇಸ್ಲಾಂ ಯುವತಿಯೊಬ್ಬಳು ತನ್ನ ಬಾಲ್ಯದ ಗೆಳೆಯನನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರವಾದ ಘಟನೆ ಮಧ್ಯಪ್ರದೇಶದ ಖಾಂಡ್ಯಾದಲ್ಲಿ ನಡೆದಿದೆ.

ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯ ನಿವಾಸಿ, ಸಫೀನಾ ಎಂಬ ಮುಸ್ಲಿಂ ಯುವತಿ ತನ್ನ ಬಾಲ್ಯದ ಗೆಳೆಯ ಸಂತ ಕುಮಾರ್ ಠಾಕೂರ್ ಅವರನ್ನು ಮದುವೆಯಾಗಲು ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಮಹಾದೇವಗಢ ದೇವಾಲಯದಲ್ಲಿ ಸನಾತನ ಧರ್ಮವನ್ನು ಸ್ವೀಕರಿಸಿ `ಸಿಮ್ರನ್’ ಎಂದು ಹೆಸರನ್ನು ಬದಲಾಯಿಸಿಕೊಂಡು ವೈದಿಕ ವಿಧಿಗಳ ಪ್ರಕಾರ ವಿವಾಹವಾದರು. ಜತೆಗೆ, `ನಾನು ಸ್ವಯಂ ಪ್ರೇರಣೆಯಿಂದ ಮತ್ತು ತನ್ನ ನಂಬಿಕೆಯ ಆಧಾರದ ಮೇಲೆ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ’ ಎಂದು ಸಿಮ್ರಾನ್ ಹೇಳಿದ್ದಾಳೆ. ಮಾಧ್ಯಮಗಳೊಂದಿಗೆ ಮಾತನಾಡಿದ ಯುವತಿ ಸಿಮ್ರನ್, ಸನಾತನ ಧರ್ಮದ ಬಗ್ಗೆ ತನಗೆ ಬಹಳ ಹಿಂದಿನಿಂದಲೂ ವಿಶೇಷವಾದ ನಂಟು ಇದೆ ಎಂದು ಹೇಳಿದಳು. ಸಿಮ್ರನ್ ಪ್ರಕಾರ, ಸನಾತನ ಧರ್ಮವು ಮಹಿಳೆಯರಿಗೆ ಗೌರವ ಮತ್ತು ಸಮಾನ ಸ್ಥಾನಮಾನವನ್ನು ನೀಡುತ್ತದೆ, ಇದು ಈ ಧರ್ಮವನ್ನು ಸ್ವೀಕರಿಸಲು ಪ್ರೇರೇಪಿಸಿತು. ಅಷ್ಟೊಂದು ಸುಲಭ ಇರಲಿಲ್ಲ ಈ ನಿರ್ಧಾರ ತೆಗೆದುಕೊಳ್ಳಲು ಎಂದು ಹೇಳಿದಳು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!