ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಬೆಂಗಳೂರು ಏರ್‌ಪೋರ್ಟ್ನಿಂದ ಮಹತ್ವದ ಸೂಚನೆ!

ಗಣರಾಜ್ಯೋತ್ಸವ ಮತ್ತು ದೀರ್ಘ ವಾರಾಂತ್ಯದ ಹಿನ್ನೆಲೆಯಲ್ಲಿ ಬೆಂಗಳೂರು ಏರ್‌ಪೋರ್ಟ್ ನ ಪ್ರಯಾಣಿಕರಿಗೆ ಪ್ರಮುಖ ಸೂಚನೆ ನೀಡಿದೆ.

ಹೆಚ್ಚುವರಿ ಭದ್ರತಾ ಕ್ರಮಗಳು ಮತ್ತು ಪ್ರಯಾಣಿಕರ ದಟ್ಟಣೆ ನಿರೀಕ್ಷೆ ಹಿನ್ನೆಲೆ, ವಿಮಾನ ನಿಲ್ದಾಣಕ್ಕೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಗಮಿಸುವಂತೆ ಕೋರಲಾಗಿದೆ. ಚೆಕ್-ಇನ್ ಮತ್ತು ಭದ್ರತಾ ತಪಾಸಣೆಗಳಿಗೆ ಹೆಚ್ಚಿನ ಸಮಯ ಮೀಸಲಿಡಿ, ವಿಳಂಬ ತಪ್ಪಿಸಲು ಸಹಕರಿಸಿ ಎಂದು ಏರ್‌ಪೋರ್ಟ್ ಆಡಳಿತ ಮಂಡಳಿ ತಿಳಿಸಿದೆ. ಇನ್ನು ಗಣರಾಜ್ಯೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಏರ್‌ಪೋರ್ಟ್ಗೆ ಬರುವ ಪ್ರತಿ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ಸ್ಕ್ರೀನಿಂಗ್, ಲಗೇಜ್ ಚೆಕ್ಕಿಂಗ್, ಚೆಕ್ ಇನ್‌ನಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಸಿಐಎಸ್‌ಎಫ್ ಸಿಬ್ಬಂದಿ ಕೈಗೊಂಡಿದ್ದು, ದೀರ್ಘ ವಾರಾಂತ್ಯದ ಹಿನ್ನೆಲೆಯಲ್ಲಿ ಪ್ರಯಾಣಿಕರ ಭಾರೀ ಆಗಮನ ನಿರೀಕ್ಷೆ ಇದೆ. ಹೆಚ್ಚುವರಿ ಭದ್ರತಾ ಕ್ರಮಗಳ ಕಾರಣ ಪ್ರವೇಶ ದ್ವಾರಗಳು ಹಾಗೂ ಭದ್ರತಾ ತಪಾಸಣೆಯಲ್ಲಿ ಸಮಯ ಹೆಚ್ಚು ತೆಗೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಕೊನೆ ಕ್ಷಣದ ವಿಳಂಬ ಅಥವಾ ವಿಮಾನ ತಪ್ಪುವ ಪರಿಸ್ಥಿತಿಯಿಂದ ದೂರ ಉಳಿಯಲು ತುಸು ಮೊದಲೇ ಆಗಮಿಸುವಂತೆ ಪ್ರಯಾಣಿಕರಿಗೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಅಲ್ಲದೆ, ಚೆಕ್-ಇನ್ ಸಮಯ ಮತ್ತು ಬೋರ್ಡಿಂಗ್ ವಿವರಗಳು ಸೇರಿದಂತೆ ವಿಮಾನಕ್ಕೆ ಸಂಬಂಧಿಸಿದ ಮಾಹಿತಿಗಾಗಿ ತಮ್ಮ ತಮ್ಮ ವಿಮಾನಯಾನ ಸಂಸ್ಥೆಗಳೊಂದಿಗೆ ನೇರವಾಗಿ ಸಂಪರ್ಕಿಸುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!