ಗಣರಾಜ್ಯೋತ್ಸವ ಮತ್ತು ದೀರ್ಘ ವಾರಾಂತ್ಯದ ಹಿನ್ನೆಲೆಯಲ್ಲಿ ಬೆಂಗಳೂರು ಏರ್‌ಪೋರ್ಟ್ ನ ಪ್ರಯಾಣಿಕರಿಗೆ ಪ್ರಮುಖ ಸೂಚನೆ ನೀಡಿದೆ.
ಹೆಚ್ಚುವರಿ ಭದ್ರತಾ ಕ್ರಮಗಳು ಮತ್ತು ಪ್ರಯಾಣಿಕರ ದಟ್ಟಣೆ ನಿರೀಕ್ಷೆ ಹಿನ್ನೆಲೆ, ವಿಮಾನ ನಿಲ್ದಾಣಕ್ಕೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಗಮಿಸುವಂತೆ ಕೋರಲಾಗಿದೆ. ಚೆಕ್-ಇನ್ ಮತ್ತು ಭದ್ರತಾ ತಪಾಸಣೆಗಳಿಗೆ ಹೆಚ್ಚಿನ ಸಮಯ ಮೀಸಲಿಡಿ, ವಿಳಂಬ ತಪ್ಪಿಸಲು ಸಹಕರಿಸಿ ಎಂದು ಏರ್‌ಪೋರ್ಟ್ ಆಡಳಿತ ಮಂಡಳಿ ತಿಳಿಸಿದೆ. ಇನ್ನು ಗಣರಾಜ್ಯೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಏರ್‌ಪೋರ್ಟ್ಗೆ ಬರುವ ಪ್ರತಿ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ಸ್ಕ್ರೀನಿಂಗ್, ಲಗೇಜ್ ಚೆಕ್ಕಿಂಗ್, ಚೆಕ್ ಇನ್‌ನಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಸಿಐಎಸ್‌ಎಫ್ ಸಿಬ್ಬಂದಿ ಕೈಗೊಂಡಿದ್ದು, ದೀರ್ಘ ವಾರಾಂತ್ಯದ ಹಿನ್ನೆಲೆಯಲ್ಲಿ ಪ್ರಯಾಣಿಕರ ಭಾರೀ ಆಗಮನ ನಿರೀಕ್ಷೆ ಇದೆ. ಹೆಚ್ಚುವರಿ ಭದ್ರತಾ ಕ್ರಮಗಳ ಕಾರಣ ಪ್ರವೇಶ ದ್ವಾರಗಳು ಹಾಗೂ ಭದ್ರತಾ ತಪಾಸಣೆಯಲ್ಲಿ ಸಮಯ ಹೆಚ್ಚು ತೆಗೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಕೊನೆ ಕ್ಷಣದ ವಿಳಂಬ ಅಥವಾ ವಿಮಾನ ತಪ್ಪುವ ಪರಿಸ್ಥಿತಿಯಿಂದ ದೂರ ಉಳಿಯಲು ತುಸು ಮೊದಲೇ ಆಗಮಿಸುವಂತೆ ಪ್ರಯಾಣಿಕರಿಗೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಅಲ್ಲದೆ, ಚೆಕ್-ಇನ್ ಸಮಯ ಮತ್ತು ಬೋರ್ಡಿಂಗ್ ವಿವರಗಳು ಸೇರಿದಂತೆ ವಿಮಾನಕ್ಕೆ ಸಂಬಂಧಿಸಿದ ಮಾಹಿತಿಗಾಗಿ ತಮ್ಮ ತಮ್ಮ ವಿಮಾನಯಾನ ಸಂಸ್ಥೆಗಳೊಂದಿಗೆ ನೇರವಾಗಿ ಸಂಪರ್ಕಿಸುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…