ಜನ ಮನದ ನಾಡಿ ಮಿಡಿತ

Advertisement

ಆಂಧ್ರಪ್ರದೇಶ: ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪ*ಘಾತ; ಮೂವರು ಮೃತ್ಯು!

ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಎರಡೂ ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಇದರಲ್ಲಿ ಮೂವರು ದುರ್ಮರಣಕ್ಕೀಡಾಗಿದ್ದು, ಬಸ್ಸಿನಲ್ಲಿದ್ದ 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೆಲ್ಲೂರಿನಿಂದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ನಸುಕಿನ ಜಾವ ಸುಮಾರು 1:30 ರ ಸುಮಾರಿಗೆ ನಂದ್ಯಾಲ ತಲುಪಿದಾಗ ಅವಘಡ ಸಂಭವಿಸಿದೆ. ಚಲಿಸುತ್ತಿದ್ದ ಬಸ್ಸಿನ ಬಲಗಡೆಯ ಟೈರ್ ಇದ್ದಕ್ಕಿದ್ದಂತೆ ಸಿಡಿದಿದ್ದೇ ದುರಂತಕ್ಕೆ ಕಾರಣವಾಗಿದೆ.

ಟೈರ್ ಸಿಡಿದ ವೇಗಕ್ಕೆ ಬಸ್ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ವಿಭಜಕವನ್ನು ದಾಟಿ ಎದುರಿನಿಂದ ಬರುತ್ತಿದ್ದ ಮೋಟಾರ್ ಸೈಕಲ್‌ಗಳನ್ನು ಹೊತ್ತೊಯ್ಯುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್ ಮತ್ತು ಲಾರಿ ಎರಡರಲ್ಲೂ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಬಸ್ ಚಾಲಕ, ಲಾರಿ ಚಾಲಕ ಮತ್ತು ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

 

 

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!