ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಎರಡೂ ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಇದರಲ್ಲಿ ಮೂವರು ದುರ್ಮರಣಕ್ಕೀಡಾಗಿದ್ದು, ಬಸ್ಸಿನಲ್ಲಿದ್ದ 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೆಲ್ಲೂರಿನಿಂದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ನಸುಕಿನ ಜಾವ ಸುಮಾರು 1:30 ರ ಸುಮಾರಿಗೆ ನಂದ್ಯಾಲ ತಲುಪಿದಾಗ ಅವಘಡ ಸಂಭವಿಸಿದೆ. ಚಲಿಸುತ್ತಿದ್ದ ಬಸ್ಸಿನ ಬಲಗಡೆಯ ಟೈರ್ ಇದ್ದಕ್ಕಿದ್ದಂತೆ ಸಿಡಿದಿದ್ದೇ ದುರಂತಕ್ಕೆ ಕಾರಣವಾಗಿದೆ.
ಟೈರ್ ಸಿಡಿದ ವೇಗಕ್ಕೆ ಬಸ್ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ವಿಭಜಕವನ್ನು ದಾಟಿ ಎದುರಿನಿಂದ ಬರುತ್ತಿದ್ದ ಮೋಟಾರ್ ಸೈಕಲ್‌ಗಳನ್ನು ಹೊತ್ತೊಯ್ಯುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್ ಮತ್ತು ಲಾರಿ ಎರಡರಲ್ಲೂ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಬಸ್ ಚಾಲಕ, ಲಾರಿ ಚಾಲಕ ಮತ್ತು ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…