ಬಂಟ್ವಾಳ-ಎಡಪದವು ರಾಜ್ಯ ಹೆದ್ದಾರಿಯ ಮುತ್ತೂರು ಸಮೀಪದ ನೂದೊಟ್ಟು ಎಂಬಲ್ಲಿ ಚಲಿಸುತ್ತಿದ್ದ ಕಾರೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಎಡಪದವು ನಿವಾಸಿ ಧೀರೇಶ್ ಎಂಬವರು ತಮ್ಮ ಕುಟುಂಬದೊಂದಿಗೆ ಬಂಟ್ವಾಳದಿಂದ ಎಡಪದವು ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಮೂಲರಪಟ್ಣ ಸೇತುವೆಯ ಸಮೀಪ ತಲುಪಿದಾಗ ಹೆಡ್‌ಲೈಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ನೂದೊಟ್ಟು ಎಂಬ ಪ್ರದೇಶಕ್ಕೆ ಬರುತ್ತಿದ್ದಂತೆ ಕಾರಿನ ಮುಂಭಾಗದಿಂದ ಹೊಗೆ ಬರಲಾರಂಭಿಸಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರನ್ನು ನಿಲ್ಲಿಸಿ, ಕಾರಿನಲ್ಲಿದ್ದವರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಎಲ್ಲರೂ ಇಳಿಯುತ್ತಿದ್ದಂತೆ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಇಡೀ ವಾಹನಕ್ಕೆ ವ್ಯಾಪಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಹಾಗೂ ಹತ್ತಿರದ ಮನೆಗಳಿಂದ ನೀರು ತಂದು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೂ ಬೆಂಕಿಯ ಕೆನ್ನಾಲಿಗೆಗೆ ಕಾರಿನ ಅರ್ಧದಷ್ಟು ಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಭಾರೀ ನಷ್ಟ ಸಂಭವಿಸಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…