ಮದುವೆ ಆಗಿ 3 ವರ್ಷಗಳಾದರೂ ಮಕ್ಕಳಾಗಿಲ್ಲ ಎಂದು ಕಾಟ ಕೊಡುತ್ತಿದ್ದ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ನಡೆದಿದೆ.
21 ವರ್ಷದ ಪತ್ನಿ ರಾಜೇಶ್ವರಿಯನ್ನು ಪತಿ ಫಕೀರಪ್ಪ ಗಿಲಕ್ಕನವರ ಕೊಲೆ ಮಾಡಿದ್ದಾನೆ. ಬಳಿಕ ಹೃದಯಾಘಾತದಿಂದ ಮೃತಳಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಎನ್ನಲಾಗಿದೆ. ಮದುವೆಯಾಗಿ 3 ವರ್ಷಗಳಾದರೂ ಮಕ್ಕಳಾಗಿಲ್ಲ ಎಂದು ಹೆಂಡತಿ ಕಾಟ ಕೊಡುತ್ತಿದ್ದಳು. ಕಿರಿಕಿರಿಗೆ ಬೇಸತ್ತಿದ್ದ ಪತಿ ಸಿಟ್ಟಿಗೆದ್ದು ಉಸಿರುಗಟ್ಟಿಸಿ ಪತ್ನಿಯನ್ನೇ ಕೊಲೆ ಮಾಡಿದ್ದು, ಬಳಿಕ ಪತ್ನಿ ಹೃದಯಾಘಾತದಿಂದ ಮೃತಳಾಗಿದ್ದಾಳೆ ಎಂಬುದಾಗಿ ಸಂಬAಧಿಕರೆಲ್ಲರಿಗೂ ಫೋನ್ ಮಾಡಿ ತಿಳಿಸಿದ್ದಾನೆ. ಅಂತ್ಯಕ್ರಿಯೆಗೆ ಬಂದ ಪೋಷಕರಿಗೆ ಮೃತ ರಾಜೇಶ್ವರಿ ಕೊರಳಲ್ಲಿ ಕಾಣಿಸಿದ್ದ ಗುರುತೊಂದನ್ನು ನೋಡಿ ಅನುಮಾನ ವ್ಯಕ್ತವಾಗಿದೆ. ಕೂಡಲೇ ಪೋಷಕರು ಬೈಲಹೊಂಗಲ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಕೊಲೆ ಎಂಬುದು ದೃಢವಾಗಿದೆ. ಕೂಡಲೇ ಪೊಲೀಸರು ಆರೋಪಿ ಫಕೀರಪ್ಪ ಗಿಲಕ್ಕನವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ವಿಚಾರಣೆ ವೇಳೆ ಕೊಲೆಗೈದಿರುವುದಾಗಿ ಆರೋಪಿ ತಪ್ರೊಪ್ಪಿಕೊಂಡಿದ್ದಾನೆ. ಸದ್ಯ ಆರೋಪಿಯನ್ನ ಹಿಂಡಲಗಾ ಜೈಲಿಗೆ ರವಾನಿಸಲಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…