ಎಕ್ಸ್ ಪ್ರೆಸ್ ಬಸ್ ನಿಂದ ಹೊರಕ್ಕೆ ಎಸೆಯಲ್ಪಟ್ಟ ಮಹಿಳೆಯೋರ್ವರು ಗಂಭೀರ ಗಾಯಗಳೊಂದಿಗೆ ಹೆದ್ದಾರಿ ಬದಿ ಬಿದ್ದಿರುವುದನ್ನು ಕಂಡ ಸಮಾಜ ಸೇವಕ ಕಟಪಾಡಿ ಅಭಿರಾಜ್ ಸುವರ್ಣ ಅವರು ತನ್ನ ಕಾರ್ ನಲ್ಲಿ ಚಿಕಿತ್ಸೆಗೆ ತುರ್ತಾಗಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆಯನ್ನು ಮೆರೆದ ಘಟನೆ ಉಡುಪಿಯ ಕಟಪಾಡಿಯಲ್ಲಿ ನಡೆದಿದೆ.
ಅಂಡರ್ ಪಾಸ್ ಕಾಮಗಾರಿ ನಿರತ ಕಟಪಾಡಿಯ ಬಸ್ ತಂಗುದಾಣದಲ್ಲಿ ಕಟಪಾಡಿ ಮೂಡಬೆಟ್ಟು ಕುದ್ರಾಡಿ ಎಂಬಲ್ಲಿನ ಚಿಕ್ಕ ಪೂಜಾರ್ತಿ (50) ಎಂಬವರು ಉಡುಪಿಯತ್ತ ತೆರಳಲು ಎಕ್ಸ್ ಪ್ರೆಸ್ ಬಸ್ ಹತ್ತಿದ್ದರು. ಬಸ್ ಚಲಿಸುತ್ತಿದ್ದಂತೆಯೇ ಕೆಲವೇ ಕ್ಷಣಗಳಲ್ಲಿ ತಿರುವಿನಲ್ಲಿ ಈಕೆ ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಇದೇ ಹಾದಿಯಾಗಿ ತೆರಳುತ್ತಿದ್ದ ಅಭಿರಾಜ್ ಸುವರ್ಣ ಈಕೆಯನ್ನು ಚಿಕಿತ್ಸೆಗೆ ಕರೆದೊಯ್ಯಲು ಯಾವುದೇ ವಾಹನಗಳ ಲಭ್ಯವಿಲ್ಲದುದನ್ನು ಗಮನಿಸಿ, ಮತ್ತು ತುರ್ತು ಚಿಕಿತ್ಸೆಯ ಅಗತ್ಯತೆಯನ್ನು ಮನಗಂಡು ತನ್ನ ಕಾರ್ ಮೂಲಕ ಉಡುಪಿಯ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇನ್ನು ಐಸಿಯು ವಿನಲ್ಲಿ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…