ಬೈಕ್‌ನ ಚಕ್ರದಡಿ ಸಿಲುಕಿ ಬೈಕ್‌ನ ಸವಾರನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಕೆ.ಜಿ ರೋಡ್ ಬಳಿ ಸಂಭವಿಸಿದೆ.

ಮೃತ ಸವಾರ ಬ್ರಹ್ಮವಾರ ಮಟಪಾಡಿಯ ನಿವಾಸಿ ಎಂದು ತಿಳಿದುಬಂದಿದೆ. ಟ್ರಕ್ ನ ಚಕ್ರದಡಿ ಸಿಲುಕಿದ ಬೈಕ್ ಸವಾರನ ದೇಹವು ಛಿದ್ರ ಛಿದ್ರಗೊಂಡಿದೆ. ಘಟನಾ ಸ್ಥಳದಲ್ಲಿದ್ದು ಬ್ರಹ್ಮಾವರ ಆರಕ್ಷಕ ಠಾಣೆಯ ಮುಖ್ಯ ಆರಕ್ಷಕ ಮಹಾಲಿಂಗ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಶವ ತೆರವುಗೊಳಿಸಲು ಹಾಗೂ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು, ಮತ್ತು ಬ್ರಹ್ಮಾವರದ ಅಂಬುಲೆನ್ಸ್ ಚಾಲಕ ನೆರವಾಗಿದ್ದಾರೆ.



