ಕರಾವಳಿ

ಉಳ್ಳಾಲ: ಮನೆಗೆ ನುಗ್ಗಿ ಕಪಾಟು ಜಾಲಾಡಿದ ಕಳ್ಳರು; ಬೆಲೆಬಾಳುವ ವಸ್ತು ಕಳ್ಳತನ!

ಕಳ್ಳರು ಮನೆಗೆ ನುಗ್ಗಿ ಕಪಾಟು ಜಾಲಾಡಿ ಬೆಲೆ ಬಾಳುವ ವಸ್ತುಗಳನ್ನು ಕಳವುಗೈದ ಘಟನೆ ತಲಪಾಡಿ ಗ್ರಾಮ ಕೆ.ಸಿನಗರ ಪಲಾಹ್ ಸ್ಕೂಲ್ ಬಳಿ ನಡೆದಿದ್ದು, ಭಾನುವಾರ ಬೆಳಕಿಗೆ ಬಂದಿದೆ.

ಕೆಸಿನಗರ ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಎಲಿಯಾರ್ ಪದವು ಅಂಗಡಿ ಹೊಂದಿದ್ದ ಅಬೂಬಕ್ಕರ್ ಅವರು ಕಳೆದ 25 ವರ್ಷ ಗಳಿಂದ ಸೌದಿ ಅಲ್ ಕೋಬಾರ್ ನಲ್ಲಿ ಉದ್ಯೋಗದಲ್ಲಿ ಇದ್ದು, ಕಳೆದ ಆಗಸ್ಟ್ ತಿಂಗಳಲ್ಲಿ ಅಬೂಬಕ್ಕರ್ ಪತ್ನಿ ಝೀನತ್ ಪುತ್ರ ಇಝಾಮ್ ಹಾಗೂ ಪುತ್ರಿ ಸಫಾ ಈ ಮನೆಗೆ ಬೀಗ ಹಾಕಿ ಕುಟುಂಬ ಸಮೇತ ಸೌದಿಗೆ ಹೋಗಿದ್ದರು.

ಇದರ ಬಳಿಕ ಅಬೂಬಕ್ಕರ್ ಅವರ ಸಹೋದರ ನ ಪತ್ನಿ ಮೈನಾಝ್ ಇಂದು ಮನೆ ನೋಡಿ ಸ್ವಚ್ಛ ಮಾಡಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಮನೆಯ ಮುಂಬಾಗಿಲನ್ನು ಒಡೆದು ಒಳ ನುಗ್ಗಿದ ಕಳ್ಳರು ಕೆಳ ಮಹಡಿಯಲ್ಲಿರುವ ಮೂರು ಕೊಠಡಿಗಳು ಹಾಗೂ ಮೊದಲ ಮಹಡಿಯಲ್ಲಿ ಇರುವ ಒಂದು ಕೊಠಡಿಯಲ್ಲಿರುವ ಒಟ್ಟು ನಾಲ್ಕು ಕಪಾಟುಗಳನ್ನು ಒಡೆದು ಜಾಲಾಡಿದ್ದಾರೆ. ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಅಲ್ಲದೇ ಅಡುಗೆ ಕೋಣೆಯ ಕಪಾಟುಗಳನ್ನು ಜಾಲಾಡಿದ ಕಳ್ಳರಿಗೆ ಚಿನ್ನಾಭರಣ ಸಿಕ್ಕಿಲ್ಲ.

ಈ ಹಿನ್ನೆಲೆಯಲ್ಲಿ ಕಳ್ಳರು ಕಪಾಟಿನಲ್ಲಿದ್ದ ಬೆಲೆ ಬಾಳುವ ವಾಚ್, ಮೊಬೈಲ್ ಕಳವುಗೈದಿದ್ದಾರೆ. ಈ ಮನೆಯ ಕುಟುಂಬ ವಿದೇಶಕ್ಕೆ ಹೋಗುವ ಮೊದಲೇ ಚಿನ್ನಾಭರಣಗಳನ್ನು ಸೇಫ್ ಲಾಕರ್‌ನಲ್ಲಿ ಇಟ್ಟು ಹೋಗಿದ್ದರು ಎಂದು ಅಬೂಬಕ್ಕರ್ ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಕಳವುಗೈದ ಆರೋಪಿಗಳು ಚಿನ್ನಾಭರಣ ದೋಚಲು ಬಂದಿದ್ದು, ಚಿನ್ನಾಭರಣ ಸಿಗದ ಕಾರಣ ಮೊಬೈಲ್, ವಾಚ್ ಕಳವುಗೈದಿರಬೇಕು ಎಂದು ಶಂಕಿಸಲಾಗಿದೆ. ಈ ಬಗ್ಗೆ ಅಬೂಬಕ್ಕರ್ ಅವರ ಬಾವ ಶೇಖಬ್ಬ ಅವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…

7 hours ago

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…

7 hours ago

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…

7 hours ago

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…

7 hours ago

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…

7 hours ago

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…

7 hours ago