ಭಾರತೀಯ ನೇವಿ ಅಧೀನದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕೆಡೆಟ್ ಮಂಗಳೂರಿನ ಲಿಶಾ ಡಿ.ಎಸ್ ಅವರಿಗೆ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ನೀಡುವ ಪರಮೋಚ್ಚ ಪ್ರಶಸ್ತಿ ರಕ್ಷಾಮಂತ್ರಿ ಕಂಮಂಡೇಶ್ ಗೌರವ ಲಭಿಸಿದೆ.
ಜ.24ರಂದು ಹೊಸದಿಲ್ಲಿಯ ಡಿಸಿಎಂಸಿಸಿ ಕ್ಯಾಂಪಸ್‌ನಲ್ಲಿ ನಡೆದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ಗೌರವ ಪ್ರಧಾನ ಮಾಡಿದರು. ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಸೇವೆ ಸಲ್ಲಿಸಿದ ಸಾಧನೆಗಳನ್ನು ಗುರುತಿಸಿ ಭಾರತೀಯ ನೇವಿ ಮೂಲಕ ಈ ಗೌರವವನ್ನು ನೀಡಲಾಗಿದೆ.
ಈ ವರೆಗೆ ರಕ್ಷಾಮಂತ್ರಿ ಕಂಮಂಡೇಶ್ ಗೌರವಕ್ಕೆ ಉತ್ತರ ಭಾರತದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕೆಡೆಟ್‌ಗಳೇ ಆಯ್ಕೆಯಾಗುತ್ತಿದ್ದು, ಇದೇ ಮೊದಲಬಾರಿಗೆ ದಕ್ಷಿಣಭಾರತದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕೆಡೆಟ್‌ಗೆ ಈ ಗೌರವ ಲಭಿಸಿರುವುದು ವಿಶೇಷ.
ಮಂಗಳೂರು ಕೂಳೂರು ನಿವಾಸಿ ದೇಜಪ್ಪ ಬಂಗೇರ ಹಾಗೂ ಮಲ್ಲಿಕಾ ದಂಪತಿಗಳ ಪುತ್ರಿಯಾಗಿರುವ ಇವರು ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…