ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನವು ಜ. 28ರಂದು(ಇಂದು) ಬಾರಾಮತಿಯಲ್ಲಿ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ.
ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (66) ಅವರು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಸ್ಪಷ್ಟಪಡಿಸಿದೆ.
ಜಿಲ್ಲಾ ಪಂಚಾಯತ್ ಚುನಾವಣೆ ಹಿನ್ನೆಲೆ, ಪ್ರಚಾರಕ್ಕಾಗಿ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ರಾಜಕೀಯ ಗಣ್ಯರು ಈ ಬಗ್ಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಅಜಿತ್ ಪವಾರ್ ಜೊತೆಗೆ ವಿಮಾನದಲ್ಲಿದ್ದ ಇಬ್ಬರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ಪೈಲಟ್‌ಗಳು ಸೇರಿದಂತೆ ಒಟ್ಟು ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇನ್ನು ಘಟನಾ ಸ್ಥಳದಿಂದ ಆರು ಮೃತದೇಹ ಹೊರತೆಗೆದು ಸದ್ಯ ಆಸ್ಪತ್ರೆಗೆ ರವಾನಿಸಿದ್ದೇವೆ. ಆರಂಭದಲ್ಲಿ ಮೂರು ಮೃತದೇಹಗಳು ಪತ್ತೆಯಾಗಿದ್ದವು, ನಂತರ ಉಳಿದವುಗಳನ್ನು ಹೊರತೆಗೆಯಲಾಯಿತು ಎಂದು ಪುಣೆ ಪೊಲೀಸ್ ಅಧೀಕ್ಷಕ ಸಂದೀಪ್ ಗಿಲ್ ಮಾಹಿತಿ ನೀಡಿದ್ದಾರೆ. ವಿಮಾನವು ಬಾರಾಮತಿಯಲ್ಲಿ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸುತ್ತಿದ್ದಾಗ ಪೈಲಟ್‌ನ ನಿಯಂತ್ರಣ ತಪ್ಪಿ ರನ್‌ವೇನಿಂದ ಪಕ್ಕಕ್ಕೆ ಜಾರಿ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…