ಶ್ರೀ ಶಾರದಾ ಮಹೋತ್ಸವದ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ವಿ.ಟಿ.ರೋಡ್ ಬಾಲಕ ವೃಂದ (ರಿ) ವತಿಯಿಂದ ಈ ವರ್ಷದ ಶ್ರೀ ಶಾರದಾ ಮಹೋತ್ಸವದ ವಿಜ್ಞಾಪನಾ ಪತ್ರವನ್ನು ವಿ.ಟಿ ರಸ್ತೆಯಲ್ಲಿರುವ ಶ್ರೀಕೃಷ್ಣ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಉತ್ಸಾಹಿ ಯುವಕರು ಸೇರಿ ಪ್ರತಿ ವರ್ಷ ಇಲ್ಲಿ ಶಾರದೋತ್ಸವವನ್ನು ಬಹಳ ಸಡಗರದಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಈ ವರ್ಷ ವಿ.ಟಿ.ರೋಡ್ ಬಾಲಕ ವೃಂದ 25 ನೇ ವರ್ಷದ ಶಾರದ ಮಹೋತ್ಸವವನ್ನು ಆಚರಿಸಲಿದ್ದು, ಸ್ವರ್ಣ ವೀಣೆ ಹಾಗೂ ಬೆಳ್ಳಿಯ ಪ್ರಭಾವಳಿಯನ್ನು ದೇವಿಗೆ ಸಮರ್ಪಿಸಲಿದೆ. ಅದಕ್ಕಾಗಿ ಆಸ್ತಿಕ ಭಕ್ತ ಬಾಂಧವರಿಂದ ಉದಾರ ಕೊಡುಗೆಯನ್ನು ಅಪೇಕ್ಷಿಸಿದೆ. ಇಂತಹ ಮಹತ್ಕಾರ್ಯದಲ್ಲಿ ನಾವೆಲ್ಲರೂ ಸಹಕರಿಸಿ ದೇವಿಯ ಕೃಪೆಗೆ ಪಾತ್ರರಾಗೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಮಂದಿರದ ಅರ್ಚಕರಾದ ವೇದಮೂರ್ತಿ ಕೃಷ್ಣಾನಂದ ಭಟ್, ವಿ.ಟಿ.ರೋಡ್ ಬಾಲಕ ವೃಂದದ ಅಧ್ಯಕ್ಷ ವರುಣ್ ಪೈ, ಕಾರ್ತಿಕ್ ಪೈ, ರಾಜೇಶ್ ಪಡಿಯಾರ್, ನಾರಾಯಣ ನಾಯಕ್, ರಜತ್ ಭಂಡಾರ್ಕರ್, ಉದ್ಯಮಿ ಕುಡ್ಪಿ ಜಗದೀಶ್ ಶೆಣೈ, ಶ್ರೀ ಕೃಷ್ಣ ಮಂದಿರದ ಟ್ರಸ್ಟಿಗಳು, ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಗಣ್ಯರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…