ಮಂಗಳೂರು : ಮನೆಯಲ್ಲಿದ್ದ ದೈವಗಳ ಮೂರ್ತಿಗಳನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಮಂಗಳೂರಿನ ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಅಮಿತಾ ಎಂಬುವವರ ತಾಯಿ ಮನೆಯಲ್ಲಿ ದೈವಗಳ ಮೂರ್ತಿಗಳು ಹಾಗೂ ಅದಕ್ಕೆ ಸಂಬಂಧಪಟ್ಟ ಪೂಜಾ ಪರಿಕರಗಳು ಇದ್ದವು. ಈ ಮನೆಯಲ್ಲಿ ಯಾರೂ ವಾಸವಿರದ ಕಾರಣ ಕೇವಲ ಪೂಜೆ ಮಾಡಿ ದೀಪ ಹಚ್ಚಿ ನಂತರ ಬೀಗ ಹಾಕಲಾಗುತ್ತಿತ್ತು. ರಾತ್ರಿ ಸಮಯ ಯಾರೋ ಅಪರಿಚಿತರು ಮನೆಯ ಮೇಲ್ಚಾವಣಿಯ ಹಂಚು ತೆಗೆದು ಮನೆಯೊಳಗೆ ಪ್ರವೇಶಿಸಿ ಸುಮಾರು 1,00,000 ಮೌಲ್ಯದ 1 ಪಸಪ್ಪ ದೈವದ ತಾಮ್ರದ ಮೂರ್ತಿ, 1 ಮಂತ್ರದೇವತೆಯ ಬೆಳ್ಳಿಯ ಮೂರ್ತಿ, 1 ಕಲ್ಲುರ್ಟಿ ಪಂಜುರ್ಲಿ ದೈವದ ತಾಮ್ರದ ಮೂರ್ತಿ, 1 ಬೆಳ್ಳಿಯ ಕಡ್ಸಲೆ, 2ತಾಮ್ರದ ಘಂಟೆ, 4 ತಾಮ್ರದ ಚೆಂಬು ಹಾಗೂ 1 ಎಲ್.ಇ.ಡಿ ಟಿ.ವಿ ಕಳವು ಮಾಡಿದ ಬಗ್ಗೆ ದೂರು ದಾಖಲಾಗಿತ್ತು. ಸುರತ್ಕಲ್ ಪೊಲೀಸರು ಕೃತ್ಯ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು, ತಾಂತ್ರಿಕ ವಿಧಾನಗಳನ್ನು ಪರಿಶೀಲನೆ ನಡೆಸಿದಾಗ ವಾಜೀದ್ ಜೆ ಅಲಿಯಾಸ್ ವಾಜಿ ಎಂಬಾತನ್ನು ದಸ್ತಗಿರಿ ಮಾಡಿ ವಿಚಾರಿಸಲಾಯ್ತು. ಈತನ ಹೇಳಿಕೆಯಂತೆ ಕೃತ್ಯ ಎಸಗಿದ್ದಾಗಿ ಹಾಗೂ ಮನೆಕಳ್ಳತನ ಮಾಡಿದ ಮಾಲಿನಲ್ಲಿ ಹಿತ್ತಾಳೆ ಹಾಗೂ ತಾಮ್ರದ ಸಾಮಾಗ್ರಿಗಳನ್ನು ಜೋಕಟ್ಟೆಯ ಸಯ್ಯದ್ ಆಲಿ ಎಂಬಾತನಿಗೆ ಮಾರಾಟ ಮಾಡಿದ್ದಾಗಿ ತಿಳಿಸಿದಂತೆ ಸಯ್ಯದ್ ಆಲಿ ಎಂಬಾತನನ್ನು ದಸ್ತಗಿರಿ ಮಾಡಿ ಆರೋಪಿಗಳಿಂದ ಮನೆಯಿಂದ ಕಳ್ಳತನವಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…