ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಪೋಸ್ಟ್ಗಳನ್ನು ಹಂಚಿಕೊಂಡ ಇಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಕುಂದಾಪುರ ಶಾಖೆಯ ವ್ಯವಸ್ಥಾಪಕ, ವಾರಂಬಳ್ಳಿ ಗ್ರಾಮದ ಮೂಡು ಗರಡಿ ರಸ್ತೆಯ ನಿವಾಸಿ ಸಂತೋಷ ಕುಮಾರ್ ಶೆಟ್ಟಿ ಹಾಗೂ ಕಲ್ಪತರು ಇಂಡಸ್ಟ್ರೀಸ್ ಮಾಲೀಕ, ಕೋಟೇಶ್ವರ ಹಾಲಾಡಿ ರೋಡ್‌ನ ಕೆ.ನಾಗರಾಜ ಬಂಧಿತ ಆರೋಪಿಗಳಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಧರ್ಮಗಳ ಮಧ್ಯೆ ದ್ವೇಷ ಹರಡಿಸುವಂತಹ ವಿಡಿಯೋ ಹಾಕಿದ ಬಗ್ಗೆ ಇವರಿಬ್ಬರ ವಿರುದ್ಧ ಜ.29ರಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಮತ್ತು ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಮಾರ್ಗದರ್ಶನದಲ್ಲಿ ಬ್ರಹ್ಮಾವರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅಶೋಕ ಮಾಳಾಬಗಿ, ಸುದರ್ಶನ್ ದೊಡಮನಿ ಹಾಗೂ ಠಾಣಾ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…
ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…