ಕರಾವಳಿ

ರಾಜ್ಯ ಮಹಿಳಾ ಜಾನಪದ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸಮ್ಮೇಳನ -ಮಹಿಳಾ ವೈಭವ 2026…!

 

ಮಂಗಳೂರು:  ದೇಶದ 144 ಕೋಟಿ ಜನ ಸಂಖ್ಯೆಯ ಮಾನವ ಸಂಪತ್ತಿನಲ್ಲಿ ಬಹುತೇಕ ಮಹಿಳೆಯರು ಇದ್ದಾರೆ.

 

ಅವರು ಸಮಾಜದಲ್ಲಿ ದೊಡ್ಡ ಶಕ್ತಿಯಾಗಿದ್ದಾರೆ. ಅವರಿಗೆ ಸಮಾಜದಲ್ಲಿ ಅಪಾರ ಗೌರವವೂ ಇದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದ್ದಾರೆ.

ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಮಹಿಳಾ ಸಶಕ್ತಿಕರಣದ ಸಲುವಾಗಿ ನಗರದ ಪುರಭವನದಲ್ಲಿ ನಡೆದ ರಾಜ್ಯ ಮಹಿಳಾ ಜಾನಪದ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸಮ್ಮೇಳನ -ಮಹಿಳಾ ವೈಭವ 2026-ರ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸ್ತ್ರಿಶಕ್ತಿ ರಾಜ್ಯ ಒಕ್ಕೂಟದ ರಾಜ್ಯಾಧ್ಯಕ್ಷೆ ರೆಹನಾ ಸುಲ್ತಾನ್ ಎಂ.ಎಂ. ಮಾತ ನಾಡಿ ಜನರಿಗೆ ನೆರವಾಗಬೇಕೆನ್ನುವ ನಿಟ್ಟಿನಲ್ಲಿ ಸ್ತ್ರೀ ಶಕ್ತಿ ಸಂಘಗಳ ಮೂಲಕ ಸಮಾಜ ಸೇವೆಗೆ ಮುಂದಾಗಿದ್ದೇವೆ. ಇದನ್ನು ಜವಾಬ್ದಾರಿ ಎಂದು ಪರಿಗಣಿಸದೆ ಹವ್ಯಾಸವಾಗಿ ಬಳಸಿಕೊಳ್ಳಬೇಕು. ಅದರಿಂದ ಸಿಗುವ ಆತ್ಮತೃಪ್ತಿಗೆ ಮಿತಿ ಇಲ್ಲ ಎಂದರು.

ಮಹಿಳೆಯರು ಸ್ತ್ರೀ ಶಕ್ತಿ ಸಂಘಗಳ ಮೂಲಕ ಒಟ್ಟಾಗಿ ಮುನ್ನಡೆದಲ್ಲಿ ಉತ್ತಮ ಸಮಾಜ ನಿರ್ಮಿಸಲು ಸಾಧ್ಯವಿದೆ ಎಂದರು.

ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮಾತನಾಡಿ ಜಾಗೃತ ಹೆಣ್ಣು ಸಮಾಜದ ಕಣ್ಣಾಗಿದ್ದು, ಎಲ್ಲಾ ಮಹಿಳೆಯರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ಮಹಿಳಾ ಸಂಘಟನೆಗಳು ಸಮಾಜ ಸೇವೆಯ ಮೂಲಕ ನೊಂದವರ ಬಾಳಿಗೆ ಬೆಳಕಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಚಂಚಲ ತೇಜೋಮಯಾ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದಾರೆ, ಆದರೆ ರಾಜಕೀಯದಲ್ಲಿ ಮಹಿಳೆಯರ ಸಂಖ್ಯೆ ಕಡಿಮೆ ಇದೆ. ಅಪರೂಪಕ್ಕೆ ಎಂಬಂತೆ ಮಹಿಳೆಯರು ರಾಜಕೀಯದಲ್ಲಿ ಕಾಣುತ್ತಿದ್ದೇವೆ. ಮಹಿಳೆಯರಿಗೆ ಹೆಚ್ಚಿನ ಅವಕಾಶಗಳನ್ನು ನೀಡಬೇಕು. ಅವರಲ್ಲಿರುವ ಪ್ರತಿಭೆಗಳಿಗೆ ವೇದಿಕೆ ಒದಗಿಸಬೇಕು ಎಂದರು.

ಪ್ರತೀ ಮಹಿಳೆಯರು ಹೊಸ ಅವಕಾಶಗಳನ್ನು ಸೃಷ್ಟಿಸಬೇಕು. ಇದಕ್ಕಾಗಿ ಮಹಿಳೆಯರು ತಮ್ಮ ಸಂಘಟನೆಗಳ ಮೂಲಕ ಬಲಗೊಳ್ಳಬೇಕು ಎಂದವರು ಹೇಳಿದರು.

ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ, ಶಿಶು ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್ , ಹಾಸನದ ಶೋಭಾ ರಾಣಿ, ಉಡುಪಿಯ ಶೋಭಾ, ವಸಂತಿ ರಾವ್ ಅನಿಸಿಕೆ ವ್ಯಕ್ತಪಡಿಸಿದರು. ಪ್ರಮುಖರಾದ ವಿಜಯಲಕ್ಷ್ಮಿ ಭಾರತಿ ಎಂ., ದೇವಕಿ ಅಚ್ಯುತ್ತ, ದಯಾಮಣಿ, ಸುನಿತಾ, ಗಾಯತ್ರಿ ಬಿ.ಎಸ್., ಶೈಲಾ ರಾವ್‌, ವಿಜಯಲಕ್ಷ್ಮಿ ಶೆಟ್ಟಿ, ಸುಕಾಲಾಕ್ಷಿ ಸುವರ್ಣ, ರೇಖಾ ಶೆಟ್ಟಿ, ಭಾರತಿ ಎಂ., ಅನುರಾಧ ರಾಜೀವ್, ಪ್ರೇಮಾ ಮಾಧವ್, ಲತಾ ಎಂ. ಶೆಟ್ಟಿ, ನಾಗವೇಣಿ, ಜ್ಯೋತಿ, ರಮಣಿ ಬೋಳೂರು, ರಮಣಿ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

ಒಕ್ಕೂಟದ ಉಪಾಧ್ಯಕ್ಷೆ ಮನೋರಮ ಉಮೇಶನ್ ಸ್ವಾಗತಿಸಿದರು. ಪ್ರಿಯಾ ಹರೀಶ್ ಕಾರ್ಯಕ್ರಮ ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

15 hours ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

16 hours ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

16 hours ago

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…

19 hours ago

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…

20 hours ago

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…

20 hours ago