ಮಂಗಳೂರು : ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳದ ಕೊಲ್ಲಂ ನಿವಾಸಿ ಜಯಚಂದ್ರ ಎಂದು ಗುರುತಿಸಲಾಗಿದೆ. ಆರೋಪಿ ಜಯಚಂದ್ರ ವಿರುದ್ಧ 2019ರಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಅಂದಿನಿಂದ ಆತ ನಾಪತ್ತೆಯಾಗಿದ್ದನು. ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಕಾರಣ ಆತನ ವಿರುದ್ಧ ವಾರಂಟ್ ಜಾರಿಯಾಗಿತ್ತು. ಆತ ಪತ್ತೆಯಾಗದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಎನ್ನುವ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆರೋಪಿಯ ಬಗ್ಗೆ ಖಚಿತ ಮಾಹಿತಿ ಪಡೆದ ಕಂಕನಾಡಿ ನಗರ ಪೊಲೀಸ್ ಸಿಬ್ಬಂದಿಗಳಾದ ಬಾಲರಾಜ್ ಮತ್ತು ರವಿಕುಮಾರ್ ಅವರು, ಕೇರಳದ ಕೊಲ್ಲಂ ನಗರದ ವಟ್ಟಕುಟ್ಟು ಲಲಿತಾ ಮಂದಿರದಲ್ಲಿರುವ ಆತನ ನಿವಾಸಕ್ಕೆ ತೆರಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…