ಜನ ಮನದ ನಾಡಿ ಮಿಡಿತ

Advertisement

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

 

ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

1935ರ ಡಿ.24ರದು ಬಸ್ರೂರಿನಲ್ಲಿ ಜನಿಸಿದ ಅಪ್ಪಣ್ಣ ಹೆಗ್ಡೆ ಅವರು 1960ರಲ್ಲಿ ಗ್ರಾಮ ಪಂಚಾಯತ್ ಸದಸ್ಯರಾಗಿ ಬಳಿಕ ಅಧ್ಯಕ್ಷರಾಗಿ ಸಾರ್ವಜನಿಕ ಬದುಕಿಗೆ ಕಾಲಿರಿಸಿದ್ದರು. ಅಪ್ಪಣ್ಣ ಹೆಗ್ಡೆ 1983-85ರ ಅವಧಿಯಲ್ಲಿ ಬೈಂದೂರಿನಿAದ ಜನತಾ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದರು. ಆನಂತರ 1988-94ರ ಅವಧಿಗೆ ವಿಧಾನ ಪರಿಷತ್ ಗೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಅಪ್ಪಣ್ಣ ಹೆಗ್ಡೆ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರಲ್ಲದೇ ಸುದೀರ್ಘ ಕಾಲ ಬಸ್ರೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!