ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!
ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ ಅವರಿಗೆ ದೆಹಲಿ ಕರ್ನಾಟಕ ಸಂಘದ ಡಾ. ಶಿವರಾಮ ಕಾರಂತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಯುವ ತಲೆಮಾರಿನ ಅತ್ಯಂತ ಜನಪ್ರಿಯ ಭಾಗವತರಾಗಿರುವ ಪಟ್ಲ ಜೆನ್ ಜೀ ಯನ್ನು ಸಾಂಪ್ರದಾಯಿಕ ಕಲೆಯಾದ ಯಕ್ಷಗಾನದತ್ತ ಸೆಳೆದವರು. ಶಾಲೆಗಳಲ್ಲಿ ಯಕ್ಷ ಶಿಕ್ಷಣದ ಮೂಲಕ ಜೆನ್ ಆಲ್ಫಾದಲ್ಲಿಯೂ ಯಕ್ಷಗಾನದ ಬಗ್ಗೆ ಆಸಕ್ತಿ ಮೂಡಿಸಿ ಅದರ ಪರಂಪರೆ, ಸಂಸ್ಕ್ರತಿಯ ಹರಿವನ್ನು ವಿಸ್ತಾರಗೊಳಿಸಿದವರು.
ಕೃತಕ ಬುದ್ದಿಮತ್ತೆ ಮಾನವ ಬದುಕನ್ನು ಮರು ರೂಪಿಸುತ್ತಿರುವ ಈ ಸಂಕ್ರಮಣ ಕಾಲಘಟ್ಟದಲ್ಲಿ ಭಾರತೀಯ ಪರಂಪರೆಯ ಭಾಗವೇ ಆಗಿರುವ ಯಕ್ಷಗಾನವನ್ನು ಕೃತಕ ಬುದ್ದಿಮತ್ತೆ ಅಭಿವೃದ್ದಿ ಹೊಂದುತ್ತಿರುವ ವಿದೇಶಗಳಲ್ಲಿ ಪ್ರದರ್ಶಿಸಿ ಭಾರತೀಯತೆಯನ್ನು ಮೆರೆದವರು. ಉನ್ನತ ಸ್ಥಾನ ಮಾನ, ಜನಪ್ರಿಯತೆಯ ಉತ್ತುಂಗ ಶಿಖರದಲ್ಲಿದ್ದರೂ ನಮೃತೆ ಮರೆಯದ, ವಿನಯವೇ ಭೂಷಣವಾಗಿರುವ ಪಟ್ಲ ಈ ಹಿಂದೆಯೂ ಹಲವು ಪ್ರಶಸ್ತಿ, ಗೌರವಗಳನ್ನು ಪಡೆದಿದ್ದಾರೆ. ಇತರರಿಗೂ ಗೌರವಗಳನ್ನು ಹಂಚಿದ್ದಾರೆ.
ಯಕ್ಷಗಾನವನ್ನು ಹೊಸ ರೂಪದಲ್ಲಿ ವಿದೇಶಗಳಿಗೆ ಕೊಂಡೊಯ್ದು ಅದಕ್ಕೊಂದು ವಿಶ್ವರೂಪತ್ವವನ್ನು ತಂದು ಕೊಟ್ಟ ಡಾ. ಶಿವರಾಮ ಕಾರಂತರ ಹೆಸರಿನ ಪ್ರಶಸ್ತಿ ಯಕ್ಷಗಾನದ ವಿಶ್ವರೂಪತ್ವವನ್ನು ಹೊಸ ತಲೆಮಾರಿಗೆ ವಿಸ್ತರಿಸಿದ ಪಟ್ಲರಿಗೆ ಸಂದಿದೆ.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ: ಹಂಪ ನಾಗರಾಜಯ್ಯ, ಪ್ರೊ. ಪ್ರಧಾನ ಗುರುದತ್ತ, ಬಿ ಆರ್ ಲಕ್ಷ್ಮಣರಾವ್, ಡಾ. ಲತಾ ರಾಜಶೇಖರ್, ಚಲನ ಚಿತ್ರ ನಿರ್ದೇಶಕ ಡಾ. ಟಿ.ಎಸ್. ನಾಗಾಭರಣ, ಚಲನಚಿತ್ರ ನಟ ಚರಣ್ ರಾಜ್ , ಸಂಪಾದಕ ವಿಶ್ವೇಶ್ವರ ಭಟ್, ಕರ್ನಾಟಕ ಸಂಘದ ಅಧ್ಯಕ್ಷ ಸಿ. ಯಂ. ನಾಗರಾಜ್, ಉಪಾಧ್ಯಕ್ಷ ಶ ವಸಂತ ಶೆಟ್ಟಿ ಬೆಳ್ಳಾರೆ, ಉಪಾಧ್ಯಕ್ಷೆ ಶ್ರೀಮತಿ ಪೂಜಾ ರಾವ್ ,ಕಾರ್ಯದರ್ಶಿ ರಾಧಾಕೃಷ್ಣ ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…