ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.12ರಂದು ಬೆಳಗ್ಗೆ ನಿಧನರಾಗಿದ್ದಾರೆ.
ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾಗಿರುವ ಲೋಕಪ್ಪ ಗೌಡ ಅವರ ಪತ್ನಿ ನಳಿನಿ ಲೋಕಪ್ಪ ಗೌಡ ಅವರು ಸಮಾಜ ಸೇವಕಿಯಾಗಿದ್ದರು. 2008ರಲ್ಲಿ ಮುಂಡೂರು ಮೃತ್ಯುಂಜೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಅವರ ನೇತೃತ್ವದಲ್ಲಿ ಬ್ರಹ್ಮಕಲಶೋತ್ಸವ ನಡೆದಿತ್ತು. 2005ರಲ್ಲಿ ಜಿ.ಪಂ ಸದಸ್ಯರಾಗಿದ್ದರು. 2010ರಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಹೀಗೆ ಹಲವಾರು ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದ ಅವರು ಸಮಾಜ ಸೇವೆಯಲ್ಲಿ ನಿರತರಾಗಿದ್ದರು. ಮೃತರು ಪತಿ ಲೋಕಪ್ಪ ಗೌಡ ಮತ್ತು ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…