ಬೆಂಗಳೂರು ನಗರದಿಂದ ಮಾದಕವಸ್ತು ಎಂಡಿಎಂಎಯನ್ನು ಖರೀದಿಸಿಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಮಂಗಳೂರು ಸಿ.ಸಿ.ಬಿ.ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರಕ್ಕೆ ಬೆಂಗಳೂರು ನಗರದಿಂದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿಕೊಂಡು ತಂದು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬೂದು ಬಣ್ಣದ ಸ್ವೀಪ್ಟ್ ಕಾರಿನಲ್ಲಿ ಮಾರಾಟ ಮಾಡಲು ಆರೋಪಿಗಳು ಯತ್ನಿಸಿದ್ದಾರೆ. ಉಳ್ಳಾಲ ತಾಲೂಕಿನ ತಲಪಾಡಿಯ ಪರಿಸರದಲ್ಲಿ ಆರೋಪಿಗಳು ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರನ್ನು ಪತ್ತೆ ಹಚ್ಚಿ ಆರೋಪಿಗಳ ಬಂಧನ ಮಾಡಿದ್ದಾರೆ. ಮುಸ್ತಫಾ ಸೀದಿಯಬ್ಬ, ಮೈಯದ್ದಿ, ಮೊಹಮ್ಮದ್ ಶಿಫಾನ್, ಎಂಬಾತರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ರೂ.11,90,000/- ಮೌಲ್ಯದ 118.13 ಗ್ರಾಂ ತೂಕದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಮೊಬೈಲ್ ಫೋನ್-4, ಬೂದು ಬಣ್ಣದ ಸ್ವಿಪ್ಟ್ ಕಾರು ಸಹಿತ ಒಟ್ಟು ರೂ. 17,95,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮುಸ್ತಫಾ ಸೀದಿಯಬ್ಬ ಎಂಬಾತನ ಮೇಲೆ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಪ್ರಕರಣ ಮತ್ತು ಮೈಯದ್ದಿ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…