ಅಕ್ರಮವಾಗಿ ಸಾಗಿಸುತ್ತಿದ್ದ ಗಾಂಜಾವನ್ನು ವಾಹನ ತಪಾಸಣೆ ವೇಳೆ ಅಬಕಾರಿ ಅಧಿಕಾರಿಗಳು ಮಂಜೇಶ್ವರದಲ್ಲಿ ವಶಪಡಿಸಿಕೊಂಡಿದ್ದಾರೆ.
ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಪ್ರಯಾಣಿಕನಾಗಿದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಪ್ರಕಾಶ್ ಡೋಂಗ್ರಾ ಎಂಬಾತನ ಬಳಿಯಲ್ಲಿ ಗಾಂಜಾ ಪತ್ತೆಯಾಗಿದೆ. 13 ಪ್ಯಾಕೆಟ್‌ಗಳಲ್ಲಿ ಟ್ರಾಲಿ ಬ್ಯಾಗ್‌ನಲ್ಲಿ ಸಾಗಿಸಲಾಗುತ್ತಿದ್ದ ಗಾಂಜಾವನ್ನು ತಪಾಸಣೆ ಸಂದರ್ಭದಲ್ಲಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಸಂಬಂಧ ಮಂಜೇಶ್ವರ ಎಕ್ಸೈಸ್ ಚೆಕ್‌ಪೋಸ್ಟ್ನ ಎಕ್ಸೈಸ್ ಸರ್ಕಲ್ ಇನ್ಸ್ಪೆಕ್ಟರ್ ಕೆ.ಕೆ. ಶಿಜಿಲ್ ಕುಮಾರ್ ಹಾಗೂ ಅವರ ತಂಡ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಈ ಸಂದರ್ಭದಲ್ಲಿ ತಪಾಸಣೆ ಕಾರ್ಯಾಚರಣೆಯಲ್ಲಿ ಎಕ್ಸೈಸ್ ಇನ್ಸ್ಪೆಕ್ಟರ್ ಆದರ್ಶ್ ಜಿ, ಸಹಾಯಕ ಎಕ್ಸೈಸ್ ಇನ್ಸ್ಪೆಕ್ಟರ್‌ಗಳಾದ ಶ್ರೀನಿವಾಸನ್ ಪತ್ತಿಲ್, ಪ್ರಮೋದ್ ಕುಮಾರ್ ಹಾಗೂ ಪ್ರಿವೆಂಟಿವ್ ಅಧಿಕಾರಿ ಪ್ರಜಿತ್ ಕುಮಾರ್, ಮಧು ಸೇರಿದಂತೆ ಇತರರು ಭಾಗವಹಿಸಿದ್ದರು. ಪ್ರಕರಣದ ಬಗ್ಗೆ ಮುಂದಿನ ತನಿಖೆ ಮುಂದುವರಿದಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…