ಕರಾವಳಿ

ಉಡುಪಿ: ವಂಚನೆ ಪ್ರಕರಣ; ಓರ್ವ ಮಹಿಳೆ ಸಹಿತ ಇಬ್ಬರ ಬಂಧನ…!

ನಗರಸಭೆಯ ಆಸ್ತಿ ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ನಕಲಿ ಸೀಲ್ ಬಳಸಿ ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಉಡುಪಿಯ 76 ಬಡಗುಬೆಟ್ಟು ಕಸ್ತೂರ್ಬಾ ನಗರದ ನಿವಾಸಿ ಸುಪೇಶ್ ಹಾಗೂ ಮೂಡು ಅಲೆವೂರಿನ ಕುಂತಲನಗರ ನಿವಾಸಿ ಶಾಂತಾ ಬಂಧಿತ ಆರೋಪಿಗಳು. ಈ ಇಬ್ಬರನ್ನು ಉಡುಪಿ ಕೃಷ್ಣಮಠದ ರಾಜಾಂಗಣ ಬಳಿ ವಶಕ್ಕೆ ಪಡೆದು, ಅವರಿಂದ ವಂಚನೆಗೆ ಬಳಸಿದ ಸೀಲ್ ಮತ್ತು ದಾಖಲೆ ಪತ್ರದ ಸೊತ್ತುಗಳನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ. ನಗರಸಭೆ ಕಚೇರಿಯಲ್ಲಿ ಆಸ್ತಿತೆರಿಗೆ ಪಾವತಿಯನ್ನು ಇ-ಸ್ವೀಕೃತಿ ಮೂಲಕ ಚಲನ್ ಸೃಜಿಸಿ ಯೂನಿಯನ್ ಬ್ಯಾಂಕ್‌ನಲ್ಲಿ ನಗರಸಭೆಯ ಖಾತೆಗೆ ಜಮಾ ಮಾಡುವ ವ್ಯವಸ್ಥೆ ಇದೆ. ಫೆಬ್ರವರಿ 3ರಂದು ಆಸ್ತಿತೆರಿಗೆ ಪಾವತಿಗಳ ತುಲನೆಯಲ್ಲಿ, ಜನವರಿ 28ರಂದು ಪಾವತಿಯಾಗಿದೆಯೆಂದು ಯೂನಿಯನ್ ಬ್ಯಾಂಕ್ ಸೀಲ್ ಹೊಂದಿದ್ದ ಚಲನ್ ಪತ್ತೆಯಾದರೂ, ಅದೇ ದಿನಾಂಕದ ಬ್ಯಾಂಕ್ ವಿವರ ಪಟ್ಟಿಯಲ್ಲಿ ಪಾವತಿ ದಾಖಲಾಗಿರಲಿಲ್ಲ ಎಂಬುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಇದೇ ರೀತಿ ಫೆಬ್ರವರಿ 4ರಂದು ಪರಿಶೀಲನೆ ನಡೆಸಿದಾಗ, ಯೂನಿಯನ್ ಬ್ಯಾಂಕ್ ಸೀಲ್ ಹೊಂದಿದ್ದ ಕೆಲವು ಚಲನ್‌ಗಳು ಈಗಾಗಲೇ ಜನವರಿ 28ರಂದು ಜನರೇಟ್ ಆಗಿದ್ದ ಅದೇ ಚಲನ್ ಸಂಖ್ಯೆಯನ್ನು ಹೊಂದಿರುವುದು ಪತ್ತೆಯಾಗಿದೆ. ಒಂದೇ ಚಲನ್ ಸಂಖ್ಯೆಗೆ ಎರಡು ಬೇರೆ ಬೇರೆ ದಿನಾಂಕಗಳಲ್ಲಿ ಸೀಲ್ ಹೊಂದಿದ ಚಲನ್‌ಗಳು ದೊರೆತಿರುವುದು ಅನುಮಾನಕ್ಕೆ ಕಾರಣವಾಗಿದೆ. ಯಾರೋ ಆರೋಪಿಗಳು ಯೂನಿಯನ್ ಬ್ಯಾಂಕ್ ಸೀಲ್ ಅನ್ನು ದುರ್ಬಳಕೆ ಮಾಡಿ ಆಸ್ತಿತೆರಿಗೆ ಪಾವತಿಸಿದ ಹಣವನ್ನು ವಂಚನೆ ಮಾಡಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಪೌರಾಯುಕ್ತ ಮಹಾಂತೇಶ್ ಅವರು ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಈ ವಿಶೇಷ ತಂಡವು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

15 hours ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

16 hours ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

16 hours ago

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…

19 hours ago

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…

20 hours ago

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…

20 hours ago