ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಮರಳು ಹಾಗೂ ಉಪಕರಣಗಳನ್ನು ವಶಪಡಿಸಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮದ ಮರತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ಅಕ್ರಮ ಮರಳುಗಾರಿಕೆ ನಡೆದಿದೆ. ಈ ವೇಳೆ ವಾರಾಹಿ ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಕಂಡುಬಂದಿದೆ.
ದಾಳಿಯಲ್ಲಿ ಸುಮಾರು 315 ಯುನಿಟ್ ಮರಳು, ಮರಳು ತೆಗೆಯಲು ಬಳಸಿದ 3 ಫೈಬರ್ ಬೋಟ್‌ಗಳು, ಮರದ ಹಿಡಿ ಇರುವ 6 ಕಬ್ಬಿಣದ ಹಾರೆಗಳು ಹಾಗೂ 8 ಫೈಬರ್ ಬುಟ್ಟಿಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಪ್ರಕರಣ ಸಂಬಂಧ ಹಲ್ನಾಡು ನಿವಾಸಿ ದೇವಾನಂದ ಶೆಟ್ಟಿ ಸೇರಿದಂತೆ ಉತ್ತರ ಪ್ರದೇಶ ರಾಜ್ಯದ ಬರಾಬಂಕಿ ಮತ್ತು ಗೊಂಡ ಜಿಲ್ಲೆಗಳಿಗೆ ಸೇರಿದ ಒಟ್ಟು 22 ಮಂದಿಯನ್ನು ಬಂಧಿಸಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…