ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಿ.ಸಿ.ರೊಡಿನ ಕೈಕಂಬದಲ್ಲಿರುವ ಖಾಸಗಿ ಖಾಲಿ ಜಾಗವೊಂದರಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ…!

ಬಿ.ಸಿ.ರೊಡಿನ ಕೈಕಂಬದಲ್ಲಿರುವ ಖಾಸಗಿ ಖಾಲಿ ಜಾಗವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ.

ಹುಲ್ಲಿನಿಂದ ತುಂಬಿದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೇಗೆ ಆಯಿತು ಎಂಬ ಕುರಿತು ಇನ್ನಷ್ಟೇ ತಿಳಿದುಬರಬೇಕಿದೆ. ಮಾಹಿತಿ ದೊರೆತ ಕೂಡಲೇ ಸ್ಥಳೀಯರು ಬಂಟ್ವಾಳದ ಅಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅಗ್ನಿನಂದಕ ವಾಹನ ಮಂಚಿಯಿಂದ ಬಂದ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ.

ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂಕಿ ವ್ಯಾಪಿಸಿದೆ. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಾದ ಸಮದ್ ಕೈಕಂಬ ಮತ್ತಿತರರು, ಸಂಚಯಗಿರಿ ನಾಗರಿಕ ಕ್ರಿಯಾ ಸಮಿತಿಸಿ ಅಧ್ಯಕ್ಷ ಸುರೇಶ್ ಕುಲಾಲ್ ಮತ್ತಿತರು ಆಗಮಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!