ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಶಾಲಾ ಬಸ್ಸಿಗೆ ಮೀನು ಸಾಗಾಟದ ಕ್ಯಾಂಟರ್ ಢಿ*ಕ್ಕಿ; ವಿದ್ಯಾರ್ಥಿಗಳಿಗೆ ಗಾಯ?!…..

ತಲಪಾಡಿಯ ಶಾರದಾ ವಿದ್ಯಾನಿಕೇತನ ಶಾಲಾ ಬಸ್ಸಿನ ಹಿಂಬದಿಗೆ ಮೀನು ಸಾಗಾಟದ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ರಾ.ಹೆ.66 ರ ಕಾಪಿಕಾಡು ಎಂಬಲ್ಲಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಏಳು ಮಂದಿ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ತಲಪಾಡಿಯ ಶಾರದಾ ನಿಕೇತನ ವಿದ್ಯಾಸಂಸ್ಥೆಗೆ ಸೇರಿದ ಬಸ್ಸು ಕಾಪಿಕಾಡಿನ ಹೆದ್ದಾರಿ ಅಂಚಿನಲ್ಲಿ ವಿದ್ಯಾರ್ಥಿಗಳನ್ನು ಬಸ್ಸಿಗೆ ಹತ್ತಿಸಿ ತಲಪಾಡಿ ಕಡೆಗೆ ತೆರಳುತ್ತಿದ್ದಾಗ, ಹಿಂದಿನಿಂದ ಬಂದ ಮೀನಿನ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಗೋವಾದಿಂದ ಕೇರಳದ ಕಡೆಗೆ ಟ್ಯಾಂಕರ್‌ನಲ್ಲಿ ಮೀನು ಸಾಗಿಸಲಾಗುತ್ತಿತ್ತು. ಕುಂದಾಪುರ ಮೂಲದ ಚಾಲಕ ಸಂಜೀವ ಎಂಬವರು ನಿದ್ರೆಯ ಮಂಪರಿನಲ್ಲಿದ್ದ ಪರಿಣಾಮ ಅಪಘಾತ ನಡೆದಿದೆ. ಘಟನೆಯಿಂದ ಬಸ್ಸಿನೊಳಗಿದ್ದ ನಾಲ್ಕು ವಿದ್ಯಾರ್ಥಿಗಳು ಹಾಗೂ ಮೂರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಓರ್ವ ವಿದ್ಯಾರ್ಥಿಯ ಕಾಲಿಗೆ ಗಾಯವಾಗಿದ್ದು ಆತನನ್ನ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿ ಒಟ್ಟು 24 ರಷ್ಟು ವಿದ್ಯಾರ್ಥಿಗಳಿದ್ದರು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!