ತಲಪಾಡಿಯ ಶಾರದಾ ವಿದ್ಯಾನಿಕೇತನ ಶಾಲಾ ಬಸ್ಸಿನ ಹಿಂಬದಿಗೆ ಮೀನು ಸಾಗಾಟದ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ರಾ.ಹೆ.66 ರ ಕಾಪಿಕಾಡು ಎಂಬಲ್ಲಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಏಳು ಮಂದಿ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ತಲಪಾಡಿಯ ಶಾರದಾ ನಿಕೇತನ ವಿದ್ಯಾಸಂಸ್ಥೆಗೆ ಸೇರಿದ ಬಸ್ಸು ಕಾಪಿಕಾಡಿನ ಹೆದ್ದಾರಿ ಅಂಚಿನಲ್ಲಿ ವಿದ್ಯಾರ್ಥಿಗಳನ್ನು ಬಸ್ಸಿಗೆ ಹತ್ತಿಸಿ ತಲಪಾಡಿ ಕಡೆಗೆ ತೆರಳುತ್ತಿದ್ದಾಗ, ಹಿಂದಿನಿಂದ ಬಂದ ಮೀನಿನ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಗೋವಾದಿಂದ ಕೇರಳದ ಕಡೆಗೆ ಟ್ಯಾಂಕರ್‌ನಲ್ಲಿ ಮೀನು ಸಾಗಿಸಲಾಗುತ್ತಿತ್ತು. ಕುಂದಾಪುರ ಮೂಲದ ಚಾಲಕ ಸಂಜೀವ ಎಂಬವರು ನಿದ್ರೆಯ ಮಂಪರಿನಲ್ಲಿದ್ದ ಪರಿಣಾಮ ಅಪಘಾತ ನಡೆದಿದೆ. ಘಟನೆಯಿಂದ ಬಸ್ಸಿನೊಳಗಿದ್ದ ನಾಲ್ಕು ವಿದ್ಯಾರ್ಥಿಗಳು ಹಾಗೂ ಮೂರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಓರ್ವ ವಿದ್ಯಾರ್ಥಿಯ ಕಾಲಿಗೆ ಗಾಯವಾಗಿದ್ದು ಆತನನ್ನ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿ ಒಟ್ಟು 24 ರಷ್ಟು ವಿದ್ಯಾರ್ಥಿಗಳಿದ್ದರು ಎಂದು ತಿಳಿದುಬಂದಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…