ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಪಂಪ್ ವೆಲ್ ವೃತ್ತದಿಂದ ಕರಾವಳಿ ಜಂಕ್ಷನ್‌ವರೆಗಿನ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮರುಚಾಲನೆ….!

ಹಲವು ಸಮಯದ ನಂತರ ನಗರದ ಪಂಪ್ ವೆಲ್ ವೃತ್ತದಿಂದ ಕರಾವಳಿ ಜಂಕ್ಷನ್‌ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಮರುಚಾಲನೆ ದೊರೆತಿದೆ.

ಲೋಕೋಪಯೋಗಿ ಇಲಾಖೆ, ಮಹಾನಗರ ಪಾಲಿಕೆ, ಮೆಸ್ಕಾಂ, ಕೆ.ಯು.ಎಫ್.ಡಿ.ಸಿ, ಪೊಲೀಸ್ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಂತರ ಮಾತನಾಡಿದ ಶಾಸಕರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ಸುಮಾರು 4 ಕೋಟಿ ಅನುದಾನವನ್ನು ಮಂಜೂರುಗೊಳಿಸಿ ಗುದ್ದಲಿ ಪೂಜೆಯನ್ನು ಸಹ ನೆರವೇರಿಸಲಾಗಿದೆ.

ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಎಲ್ಲಾ ಕಾಮಗಾರಿಗಳಿಗೆ ತಡೆ ನೀಡಿದ್ದರಿಂದ ಇಲ್ಲಿನ ರಸ್ತೆಯ ಅಭಿವೃದ್ಧಿಗೆ ಹಿನ್ನಡೆಯಾಗಿತ್ತು. ಪರಿಣಾಮ ಜನರು ಅನುಭವಿಸುತ್ತಿದ್ದ ಸಮಸ್ಯೆ ಬಗ್ಗೆ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಭೇಟಿಯಾಗಿ ಹಲವು ಬಾರಿ ಮನವಿ ಮಾಡಿದ ಕಾರಣ ಇಂದು ಈ ಕಾಮಗಾರಿಗೆ ಮತ್ತೆ ಚಾಲನೆ ದೊರೆತಿದೆ ಎಂದಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಈ ವೇಳೆ ನಿಕಟಪೂರ್ವ ಪಾಲಿಕೆ ಸದಸ್ಯರಾದ ಸಂದೀಪ್ ಗರೋಡಿ, ಅಧಿಕಾರಿಗಳಾದ, ಪ್ರೀತಂ, ಭವ್ಯ, ಹೇಮಂತ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!