Oplus_0
ಕಳೆದ ಕೆಲವು ದಿನಗಳಿಂದ ಕೆಲವು ಮಾಧ್ಯಮ ಜಾಲತಾಣಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಕಾಸರಗೋಡು ಜಿಲ್ಲೆಯ ಕೂಳೂರು ಗ್ರಾಮದ ಪ್ರತಿಷ್ಠಿತ ಉದ್ಯಮಿಗಳು ಹಾಗೂ ಕೊಡುಗೈ ದಾನಿಗಳಾದ ಡಾ| ಸದಾಶಿವ ಶೆಟ್ಟಿ ಕನ್ಯಾನ ಇವರ ಮೇಲೆ ನಡೆಯುತ್ತಿರುವ ಅಪಪ್ರಚಾರ, ಇಲ್ಲ ಸಲ್ಲದ ಮಾನಹಾನಿ ಹಾಗೂ ಆರೋಪಗಳು ಸಾರ್ವಜನಿಕವಾಗಿ ಚರ್ಚೆಯಾಗಿರುವುದು ತುಂಬಾ ಬೇಸರದ ಸಂಗತಿ ಎಂದು ಕಾಸರಗೋಡು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ನ್ಯಾಯವಾದಿ ಬಿ.ಸುಬ್ಬಯ ರೈ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.
ರಾಜರಾಜೇಶ್ವರಿ ದೇವಸ್ಥಾನ ಇದರ ಆಡಳಿತ ಮೊಕ್ತೇಸರರಾದ ಕೆ.ಕೆ. ಶೆಟ್ಟಿ ಕುತ್ತಿಕ್ಕಾರು ಮಾತನಾಡಿ, ಕೆಲವು ದಿನಗಳಿಂದ ನಡೆಯುತ್ತಿರುವ ಘಟನೆಗಳಿಂದ ಮನನೊಂದು ಕುಳೂರು ಕನ್ಯಾನ ಡಾ| ಸದಾಶಿವ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯೊಂದನ್ನು ನೀಡಿರುವುದು ಸಮಸ್ತ ಕಾಸರಗೋಡು ಜಿಲ್ಲೆಯ ಬಂಟಬಾಂಧವರಿಗೆ ಆಘಾತ ಉಂಟು ಮಾಡಿರುತ್ತದೆ. ಕಾಸರಗೋಡಿನ ಬಂಟರು ಎಲ್ಲರೂ ಒಗ್ಗಟ್ಟಿನಿಂದ ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಆಗಿರುವ ನೋವಿನಲ್ಲಿ ನಾವು ಪೂರ್ಣ ಪ್ರಮಾಣದಲ್ಲಿ ಭಾಗಿಯಾಗಿರುತ್ತೇವೆ ಎಂದರು.
ಮುಂದಿನ ದಿನಗಳಲ್ಲಿ ಡಾ| ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಪೂರ್ಣ ಬೆಂಬಲವನ್ನು ಈ ಮೂಲಕ ನೀಡುತ್ತೇವೆ. ಸಮಾಜ ಬಾಂಧವರಲ್ಲಿ ವಿನಂತಿಯೇನೆಂದರೆ ಇಂದಿನವರೆಗೆ ನಾವೆಲ್ಲರೂ ಒಗ್ಗಟ್ಟಿನಿಂದ ಸಾಮರಸ್ಯದಿಂದ ಹಾಗೂ ಸೌಹಾರ್ದತೆಯಿಂದ ನಡೆದುಕೊಂಡು ಬಂದಿರುತ್ತೇವೆ. ಇನ್ನು ಮುಂದೆಯೂ ಇದೇ ರೀತಿಯಲ್ಲಿ ನಡೆದುಕೊಳ್ಳಬೇಕಾಗಿ ಎಲ್ಲಾ ಸಮಾಜ ಭಾಂದವರಲ್ಲಿ ಕಳಕಳಿಯಿಂದ ವಿನಯಪೂರ್ವಕವಾಗಿ ವಿನಂತಿಸುತ್ತೇವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಮೋಹನ ರೈ ಕಯ್ಯಾರು, ಗೋಪಾಲಕೃಷ್ಣ ಶೆಟ್ಟಿ ಕುತ್ತಿಕ್ಕಾರು, ಕಾರ್ತಿಕ್ ಶೆಟ್ಟಿ ಮಜ್ಜಿಬೈಲ್, ಸುರೇಶ್ ಶೆಟ್ಟಿ ಕುಂಜತ್ತೂರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…