ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಗುಂಡೇಟಿನಿಂದ ಬಾಲಕ ಸಾವು; ವರದಿಯಲ್ಲಿ ಹೊರಬಿದ್ದ ಸ್ಪೋಟಕ ಮಾಹಿತಿ..!

ರಾಮಕುಂಜ ಗ್ರಾಮದಲ್ಲಿ ಜನವರಿ 24 ರಂದು ಗುಂಡೇಟಿನಿಂದ ಬಾಲಕ ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವೈದ್ಯಕೀಯ ವರದಿಯಲ್ಲಿ ಸ್ಪೋಟಕ ಮಾಹಿತಿ ಸಿಕ್ಕಿದ್ದು, ಬಾಲಕ ಆತ್ಮಹತ್ಯೆಗೆ ಮುನ್ನ ತಂದೆಗೆ ಶೂಟ್ ಮಾಡಿರುವುದು ದೃಢಪಟ್ಟಿದೆ.

ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಹಾಗೂ ಜಯಶ್ರೀ ದಂಪತಿ ಪುತ್ರ ಮೋಕ್ಷ್, ಪಾದೆ ಮನೆಯಲ್ಲಿ ಗುಂಡೇಟಿನಿಂದ ಮೃತಪಟ್ಟಿದ್ದರು. ಮೋಕ್ಷ್ ತಂದೆಗೆ ಇರಿದು ಕೋವಿಯಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿರುವುದಾಗಿ ಆರಂಭದಲ್ಲಿ ಮಾಹಿತಿ ಹರಿದಾಡಿತ್ತು. ಆದರೆ ಇದೀಗ ವೈದ್ಯಕೀಯ ಪರೀಕ್ಷೆಯಲ್ಲಿ ಮೋಕ್ಷ್ ತಂದೆ ವಸಂತ್ ಅಮೀನ್ ಗೆ ಗುಂಡೇಟು ತಗುಲಿದ್ದು ದೃಢಪಟ್ಟಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಈ ಘಟನೆ ಮೊದಲು ಬೆಳಕಿಗೆ ಬಂದಾಗ, ಕೌಟುಂಬಿಕ ಕಲಹದ ಕಾರಣದಿಂದಾಗಿ ಮೋಕ್ಷ್ ತನ್ನ ತಂದೆಯ ಹೊಟ್ಟೆಗೆ ಚಾಕುವಿನಿಂದ ಇರಿದು ನಂತರ ತನ್ನ ತಂದೆಯ ಪರವಾನಗಿ ಪಡೆದ ಬಂದೂಕನ್ನು ತಾನೇ ತಿರುಗಿಸಿಕೊಂಡಿದ್ದಾನೆ ಎಂದು ವರದಿಯಾಗಿತ್ತು. ವಸಂತ್ ಅಮೀನ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.

ಇದೀಗ ವಿವರವಾದ ವೈದ್ಯಕೀಯ ಪರೀಕ್ಷೆಗಳು ವಸಂತ್ ಅಮೀನ್ ಅವರ ಹೊಟ್ಟೆಯ ಮೇಲಿನ ಗಾಯವು ಬಂದೂಕಿನ ಗುಂಡಿನಿಂದ ಉಂಟಾಗಿದೆಯೇ ಹೊರತು ಚಾಕುವಿನಿಂದಲ್ಲ ಎಂದು ದೃಢಪಡಿಸಿವೆ. ಮಗ ಮೋಕ್ಷ್ನನ್ನು ತಂದೆ ವಸಂತ ಅವರೇ ಕೊಲೆ ಮಾಡಿರುವುದಾಗಿ ತಾಯಿ ಜಯಶ್ರೀ ಅವರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿ ಹೊರಬಿದ್ದಿದ್ದು, ಎಫ್‌ಎಸ್‌ಎಲ್ ವರದಿ ಬಂದ ಬಳಿಕವೇ ಈ ಪ್ರಕರಣಕ್ಕೆ ಪ್ರಮುಖ ಕಾರಣ ಎನೆಂದು ತಿಳಿದು ಬರಲಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!