ರಾಮಕುಂಜ ಗ್ರಾಮದಲ್ಲಿ ಜನವರಿ 24 ರಂದು ಗುಂಡೇಟಿನಿಂದ ಬಾಲಕ ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವೈದ್ಯಕೀಯ ವರದಿಯಲ್ಲಿ ಸ್ಪೋಟಕ ಮಾಹಿತಿ ಸಿಕ್ಕಿದ್ದು, ಬಾಲಕ ಆತ್ಮಹತ್ಯೆಗೆ ಮುನ್ನ ತಂದೆಗೆ ಶೂಟ್ ಮಾಡಿರುವುದು ದೃಢಪಟ್ಟಿದೆ.
ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಹಾಗೂ ಜಯಶ್ರೀ ದಂಪತಿ ಪುತ್ರ ಮೋಕ್ಷ್, ಪಾದೆ ಮನೆಯಲ್ಲಿ ಗುಂಡೇಟಿನಿಂದ ಮೃತಪಟ್ಟಿದ್ದರು. ಮೋಕ್ಷ್ ತಂದೆಗೆ ಇರಿದು ಕೋವಿಯಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿರುವುದಾಗಿ ಆರಂಭದಲ್ಲಿ ಮಾಹಿತಿ ಹರಿದಾಡಿತ್ತು. ಆದರೆ ಇದೀಗ ವೈದ್ಯಕೀಯ ಪರೀಕ್ಷೆಯಲ್ಲಿ ಮೋಕ್ಷ್ ತಂದೆ ವಸಂತ್ ಅಮೀನ್ ಗೆ ಗುಂಡೇಟು ತಗುಲಿದ್ದು ದೃಢಪಟ್ಟಿದೆ.
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಈ ಘಟನೆ ಮೊದಲು ಬೆಳಕಿಗೆ ಬಂದಾಗ, ಕೌಟುಂಬಿಕ ಕಲಹದ ಕಾರಣದಿಂದಾಗಿ ಮೋಕ್ಷ್ ತನ್ನ ತಂದೆಯ ಹೊಟ್ಟೆಗೆ ಚಾಕುವಿನಿಂದ ಇರಿದು ನಂತರ ತನ್ನ ತಂದೆಯ ಪರವಾನಗಿ ಪಡೆದ ಬಂದೂಕನ್ನು ತಾನೇ ತಿರುಗಿಸಿಕೊಂಡಿದ್ದಾನೆ ಎಂದು ವರದಿಯಾಗಿತ್ತು. ವಸಂತ್ ಅಮೀನ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.
ಇದೀಗ ವಿವರವಾದ ವೈದ್ಯಕೀಯ ಪರೀಕ್ಷೆಗಳು ವಸಂತ್ ಅಮೀನ್ ಅವರ ಹೊಟ್ಟೆಯ ಮೇಲಿನ ಗಾಯವು ಬಂದೂಕಿನ ಗುಂಡಿನಿಂದ ಉಂಟಾಗಿದೆಯೇ ಹೊರತು ಚಾಕುವಿನಿಂದಲ್ಲ ಎಂದು ದೃಢಪಡಿಸಿವೆ. ಮಗ ಮೋಕ್ಷ್ನನ್ನು ತಂದೆ ವಸಂತ ಅವರೇ ಕೊಲೆ ಮಾಡಿರುವುದಾಗಿ ತಾಯಿ ಜಯಶ್ರೀ ಅವರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿ ಹೊರಬಿದ್ದಿದ್ದು, ಎಫ್‌ಎಸ್‌ಎಲ್ ವರದಿ ಬಂದ ಬಳಿಕವೇ ಈ ಪ್ರಕರಣಕ್ಕೆ ಪ್ರಮುಖ ಕಾರಣ ಎನೆಂದು ತಿಳಿದು ಬರಲಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…