ಕರಾವಳಿ

ಮಂಗಳೂರು: ಎಸ್.ಸಿ.ಡಿ.ಸಿ.ಸಿ.ಬ್ಯಾಂಕ್‌ನಲ್ಲಿ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯ; ಅಧ್ಯಕ್ಷರ 5 ವರ್ಷಗಳ ಕನಸು ನನಸು.

ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯವನ್ನು ಮಂಗಳವಾರ(ಫೆ.17) ದೀಪ ಬೆಳಗಿಸುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು.

ಬಳಿಕ ಮಾತಾಡಿದ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು, ನಮ್ಮ ಬ್ಯಾಂಕ್ ಬೇರೆ ಬ್ಯಾಂಕ್‌ಗಳಿಗಿಂತ ಹಿಂದೆ ಉಳಿಯಬಾರದು ಎಂಬ ಉದ್ದೇಶದಿಂದ ಈ ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳನ್ನು ಅಳವಡಿಸಿಕೊಳ್ಳಲಾಗಿದೆ. ನಮ್ಮ ಶಾಖೆಗಳಲ್ಲಿ ಬಹುತೇಕ ಎಲ್ಲ ಸೇವೆಗಳನ್ನು 15-20 ವರ್ಷಗಳ ಹಿಂದೆಯೇ ಅಳವಡಿಸಿಕೊಂಡು, ಗ್ರಾಹಕ ಸ್ನೇಹಿಯಾಗಿ ಮುನ್ನಡೆಯುತ್ತಿದೆ. ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುವ ಮೂಲಕ ಹೆಸರುವಾಸಿಯಾಗಿದೆ. ಇದಕ್ಕೆ ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆಗಳು ಎಂದರು. ಆಧುನಿಕ ಸೌಲಭ್ಯಗಳ ಕುರಿತು ಮಾಹಿತಿ ನೀಡಿದ ನಂದಕುಮಾರ್ ಅವರು, ಐಎಂಪಿಎಸ್ ಅಂದ್ರೆ ಅದರ ಮೂಲಕ ಎಲ್ಲದಕ್ಕಿಂತ ಶೀಘ್ರವಾಗಿ ತಕ್ಷಣವೇ ಹಣವನ್ನು ವರ್ಗಾವಣೆ ಮಾಡಲು ಸಾಧ್ಯವಿದೆ. ಈ ಸೇವೆಯ ಮೂಲಕ ನಮ್ಮ ಬ್ಯಾಂಕಿನ ಮೊಬೈಲ್ ಅಪ್ಲಿಕೇಶನ್ ಬಳಸಿ ಗ್ರಾಹಕರು ಕ್ಷಣಾರ್ಧದಲ್ಲಿ ಹಣ ವರ್ಗಾವಣೆ ಮಾಡುವ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಐಎಂಪಿಎಸ್ ಎಂಬುದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ(NPCI) ಅಭಿವೃದ್ಧಿ ಪಡಿಸಿದ ತ್ವರಿತ ಹಣ ವರ್ಗಾವಣೆ ವ್ಯವಸ್ಥೆಯಾಗಿದ್ದು, ಇದು 24×7, ವಾರಾಂತ್ಯ ಮತ್ತು ಸಾರ್ವಜನಿಕ ರಜೆ ದಿನಗಳಲ್ಲಿಯೂ ಕಾರ್ಯನಿರ್ವಹಿಸುತ್ತದೆ. P2A (person to Account) ಮೂಲಕ ಖಾತೆ ಸಂಖ್ಯೆ ಮತ್ತು IFSC ಬಳಸಿ ಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬಹುದು. ಈಗ ಎಲ್ಲಾ ಕಡೆ ಡಿಜಿಟಲ್ ವ್ಯವಹಾರ ಆಗಿರುವ ಕಾರಣ ಯುಪಿಐ ಮೂಲಕ ಹಣಕಾಸಿನ ನಿರ್ವಹಣೆ ಸುಲಭ. ಕಳೆದ ಐದು ವರ್ಷಗಳ ಹಿಂದೆ ಬ್ಯಾಂಕ್ ಅಧ್ಯಕ್ಷರು ತಮ್ಮ ಗ್ರಾಹಕರಿಗೆ ಈ ಸೇವೆಯನ್ನು ಕಲ್ಪಿಸುವ ಯೋಚನೆ ಮಾಡಿದ್ದರು. ಅದು ಇಂದು ಸಾಕಾರವಾಗಿದೆ ಎಂದರು. ವೇದಿಕೆಯಲ್ಲಿ ಬ್ಯಾಂಕ್ ಉಪಾಧ್ಯಕ್ಷರಾದ ಬ್ಯಾಂಕ್ ನಿರ್ದೇಶಕರಾದ ವಿನಯ್ ಕುಮಾರ್ ಸೂರಿಂಜೆ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಭಾಸ್ಕರ್ ಕೋಟ್ಯಾನ್, ರಮೇಶ್, ಬ್ಯಾಂಕ್ ಸಿಇಒ ಗೋಪಾಲಕೃಷ್ಣ ಭಟ್ ಹಾಗೂ ಬ್ಯಾಂಕ್ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬೊಳ್ಯೊಟ್ಟು ಪ್ರಾಸ್ತಾವಿಕ ಮಾತನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಚಿತ್ರಲೇಖ ದೇವರನ್ನು ಸ್ತುತಿಸಿದರು. ರಾಜೀವ ಕಕ್ಕೆಪದವು ಕಾರ್ಯಕ್ರಮ ನಿರ್ವಹಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

4 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

4 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

4 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

4 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

4 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

4 days ago