ಖಾಸಗಿ ಕಂಪೆನಿಯೊಂದರ ಕಾಮಗಾರಿಯ ವೇಳೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಆಕ್ರೋಶ ವ್ಯಕ್ತವಾಗಿದ್ದಲ್ಲದೆ ಕಾರ್ಮಿಕರ ಜೊತೆ ವಾಗ್ವಾದ ನಡೆದಿರುವ ಘಟನೆ ಕೈಕಂಬದಲ್ಲಿ ನಡೆದಿದೆ.
ಬಿಸಿರೋಡಿನ ಕೈಕಂಬ ಪೊಳಲಿ ದ್ವಾರದ ಬಳಿ ಪೋಲೀಸ್ ಪಾಯಿಂಟ್‌ನ ಪಕ್ಕ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಗೇಲ್ ಗ್ಯಾಸ್ ಕಂಪೆನಿಯವರಿಂದ ಕಾಮಗಾರಿ ನಡೆಯುತಿದ್ದು, ರಸ್ತೆ ಬದಿ ಹಾಗೂ ರಸ್ತೆಗೂ ಕೆಸರು ಮಿಶ್ರಿತ ನೀರು ಹರಿದುಹೋಗಿದೆ. ಇದರಿಂದ ವಾಹನಗಳು ಕೆಸರು ಮಯವಾದರೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ಪಾದಚಾರಿಗಳು ಎದ್ದು ಬಿದ್ದು ಹೋಗುವಂತಾಗಿದೆ.
ಬಿಸಿಲು ಮಳೆಗೆ ಸ್ವಲ್ಪ ಮಟ್ಟಿಗೆ ರಕ್ಷಣೆಗೆ ಮಾಡಿರುವ ಪೋಲೀಸ್ ಪಾಯಿಂಟ್‌ನ ಸುತ್ತಲೂ ಕೆಸರು ತುಂಬಿದ್ದು, ಪೋಲೀಸರಿಗೂ ಸಂಕಟವನ್ನು ತಂದುಕೊಟ್ಟಿದೆ. ಸಾರ್ವಜನಿಕರಿಗೆ ಈ ರೀತಿಯ ಸಂಕಷ್ಟ ಎದುರಾದ ಸಂದರ್ಭದಲ್ಲಿ ಕಂಪೆನಿ ಮೌನವಾಗಿರುವುದನ್ನು ಕಂಡು ಸಾರ್ವಜನಿಕರು ಅಕ್ರೋಶ ಭರಿತರಾಗಿ ಕಾರ್ಮಿಕರ ಜೊತೆ ವಾಗ್ವಾದ ಮಾಡಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…