ಯುವಕನೊಬ್ಬ ತನ್ನ ಕೈ ಕೊಯ್ದುಕೊಂಡು, ಬಳಿಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕದ್ರಿ ಶಿವಭಾಗ್ ಬಳಿಯ ಅಪಾರ್ಟೆಂಟ್ ಒಂದರಲ್ಲಿ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಪೆರುವಾಡ್ ನಿವಾಸಿ ರೋಶನ್ ಮೃತಪಟ್ಟ ಯುವಕ. ಕದ್ರಿ ಪಾರ್ಕ್ ಬಳಿಯ ಐಸ್ ಕ್ರೀಂ ಅಂಗಡಿ ಒಂದರಲ್ಲಿ ಕೆಲಸಕ್ಕಿದ್ದ ರೋಶನ್ ನಾಲ್ಕು ತಿಂಗಳಿನಿಂದ ಅಪಾರ್ಟೆಂಟಿನಲ್ಲಿ ಇತರೇ ಯುವಕರೊಂದಿಗೆ ಬಾಡಿಗೆಗೆ ನೆಲೆಸಿದ್ದ. ತನ್ನ ಕೈಯನ್ನು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ್ದು ಕೊಠಡಿಯಲ್ಲಿ ರಕ್ತದ ಕೋಡಿಯೇ ಹರಿದಿದೆ. ಬಳಿಕ ನೇಣು ಬಿಗಿದುಕೊಂಡಿರುವ ಸಾಧ್ಯತೆಯಿದೆ. ಕೊಠಡಿಯಲ್ಲಿ ಮದ್ಯದ ಬಾಟಲಿಯೂ ಪತ್ತೆಯಾಗಿದೆ. ಈತ ತನ್ನ ಕೊಠಡಿಯಿಂದ ಹೊರಗಡೆ ಬರದೇ ಇದ್ದುದರಿಂದ ಇತರರು ಬಾಗಿಲು ತೆಗೆದು ನೋಡಿದಾಗ ಸಾವಿಗೆ ಶರಣಾಗಿದ್ದು ಕಂಡುಬAದಿದೆ.
ಸ್ಥಳದಲ್ಲಿ ರಕ್ತದಲ್ಲೇ ಹುಡುಗಿಯೊಬ್ಬಳ ಹೆಸರನ್ನು ಬರೆದಿದ್ದು ಪತ್ತೆಯಾಗಿದೆ. ಇದಲ್ಲದೆ, ತನ್ನ ವಾಟ್ಸಪ್ ಸ್ಟೇಟಸ್‌ನಲ್ಲಿ ಇದು ನನ್ನ ಕೊನೆಯ ಸ್ಟೇಟಸ್ ಅಂತಲೂ ಬರೆದುಕೊಂಡಿದ್ದಾನೆ. ಪ್ರೇಮ ವೈಫಲ್ಯದಿಂದ ಸಾವಿಗೆ ಶರಣಾಗಿದ್ದಾನೆಯೇ ಎಂಬ ಅನುಮಾನ ಇದೆ. ಏಳು ತಿಂಗಳ ಹಿಂದೆ ರೋಶನ್ ತನ್ನ ಊರಿನಲ್ಲಿಯೂ ಆತ್ಮಹತ್ಯೆಗೆ ಯತ್ನಿಸಿದ್ದ ಎಂಬುದು ಆತನ ಮನೆಯವರಿಂದ ಪೊಲೀಸರಿಗೆ ತಿಳಿದುಬಂದಿದೆ. ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…