ಉದ್ಯೋಗಕ್ಕಾಗಿ ಐರ್ಲೆಂಡ್‌ಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮೂಲದ ಯುವಕರೊಬ್ಬರು ತಮ್ಮ ನಿವಾಸದಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತರನ್ನು ಕಡಬದ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸುನಿಲ್ ಅವರ ಪುತ್ರ ಸಾಂಜೋ ಸುನಿಲ್ ಎಂದು ಗುರುತಿಸಲಾಗಿದೆ. ಇವರು ಐರ್ಲೆಂಡ್‌ನ ಡಬ್ಲಿನ್ ನಗರದದಲ್ಲಿ ವಾಸವಾಗಿದ್ದರು. ಸಾಂಜೋ ಸುನಿಲ್ ಅವರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಐರಿಶ್ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಇರಬಹುದು ಎಂದು ಶಂಕಿಸಲಾಗಿದ್ದರೂ, ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಇದನ್ನು ಸಂಶಯಾಸ್ಪದ ಸಾವು ಎಂದು ಪರಿಗಣಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಪತಿಯ ಸಾವಿನ ಸುದ್ದಿ ಕೇಳುತ್ತಿದ್ದಂತೆಯೇ ಸಾಂಜೋ ಅವರ ಪತ್ನಿ ತೀವ್ರ ಆಘಾತಕ್ಕೊಳಗಾಗಿ ಅಸ್ವಸ್ಥಗೊಂಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…