ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅಂಗನವಾಡಿಗೆ ಹೋಗುವ ವೇಳೆ ಮಗುವಿನ ಮೇಲೆ ದಾಳಿ ಮಾಡಿದ ಬೀದಿ ನಾಯಿ…!

ಅಂಗನವಾಡಿಗೆ ಹೋಗುವ ಮಗುವಿನ ಮೇಲೆ ಬೀದಿ ನಾಯಿ ದಾಳಿ ಮಾಡಿದ ಘಟನೆ ಬೋಳಂತೂರಿನಲ್ಲಿ ನಡೆದಿದೆ.

ಬೋಳಂತೂರು ನಾರ್ಶ ಬಂಗಾರಕೋಡಿ ನಿವಾಸಿ ರಿಯಾಜ್ ಎಂಬವರ ಪುತ್ರಿ ರಿಜಿಲಾ ಸಾರಮ್ಮ ಎಂಬ ಮಗುವಿನ ಮೇಲೆ ಬೀದಿ ನಾಯಿ ದಾಳಿ ಮಾಡಿದೆ. ಮನೆಯ ಸಮೀಪವೇ ಅಂಗನವಾಡಿ ಕೇಂದ್ರವಿದ್ದು, ಒಬ್ಬಳೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೀದಿ ನಾಯಿ ಏಕಾಏಕಿ ದಾಳಿ ಮಾಡಿದೆ. ಮಗುವಿನ ಮುಖ ಸಹಿತ ಇಡೀ ದೇಹದ ಮೇಲೆ ಗಾಯವಾಗಿದೆ.

ಮಗುವಿನ ಚೀರಾಟ ಕೇಳಿ ಸ್ಥಳೀಯ ಮನೆಯವರು ಬಂದು ನಾಯಿಯಿಂದ ಮಗುವನ್ನು ರಕ್ಷಣೆ ಮಾಡಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಗುವನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದೇ ವಾರದಲ್ಲಿ ಬಂಟ್ವಾಳ ತಾಲೂಕಿನಲ್ಲಿ ನಾಯಿ ಕಡಿತ ಮಾಡಿದ ಎರಡನೇ ಪ್ರಕರಣವಾಗಿದೆ.

ಬೀದಿ ನಾಯಿಗಳ ಬಗ್ಗೆ ಗಂಭೀರವಾಗಿ ಪರಿಗಣಿಸಿ ಕ್ರಮವನ್ನು ತೆಗೆದುಕೊಳ್ಳುವಂತೆ ಸರಕಾರದ ಸೂಚನೆ ಇದೇಯಾದರೂ ಸ್ಥಳೀಯ ಆಡಳಿತ ಯಾವುದೇ ಕಠಿಣ ಕ್ರಮ ತೆಗೆದುಕೊಂಡಿಲ್ಲ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಗ್ರಾಮೀಣ ಭಾಗದಲ್ಲಿ ಇಂತಹ ಅನೇಕ ಘಟನೆ ನಿತ್ಯ ನಿರಂತರವಾಗಿ ನಡೆಯುತ್ತಿದ್ದರೂ ಅಧಿಕಾರಿಗಳ ಮೌನ ಯಾಕೆ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿವೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!