ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿ ಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.
ಪೆರ್ಡೂರು ಗ್ರಾಮದ ಪಾಡಿಗಾರು ನಿವಾಸಿ ರಾಘವೇಂದ್ರ ಮತ್ತು ಕುಂಜದಕಟ್ಟೆ ನಿವಾಸಿ ಸುಧೀಂದ್ರ ಶೆಟ್ಟಿ ಯಾನೆ ಬಾಬು ಬಂಧಿತ ಆರೋಪಿಗಳು. ಈ ಇಬ್ಬರು ಪೆರ್ಡೂರು ದೇವಸ್ಥಾನದ ಎದುರಿನ ಗದ್ದೆಯಲ್ಲಿದ್ದ ಕರುವನ್ನು ಕಳವು ಮಾಡಿ, ಕಸಾಯಿಖಾನೆಗೆ ಮಾರಾಟ ಮಾಡುವ ಉದ್ದೇಶದಿಂದ ಆಟೋ ರಿಕ್ಷಾದಲ್ಲಿ ಸಾಗಿಸಲು ಯತ್ನಿಸಿದರೆಂದು ಆರೋಪಿಸಲಾಗಿದೆ. ಈ ಕುರಿತು ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…