ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿ*ಕ್ಕಿ ; ಓರ್ವ ಬೈಕ್ ಸವಾರ ಮೃ*ತ್ಯು…!

ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಅಂಬಾಗಿಲು ಪೆರಂಪಳ್ಳಿ ಕ್ರಾಸ್ ಬಳಿಯ ನ್ಯೂ ಜಯಲಕ್ಷ್ಮೀ ಸ್ಟೀಲ್ಸ್ ಎದುರುಗಡೆ ಸಂಭವಿಸಿದೆ.

ಮೃತನನ್ನು ಉಡುಪಿ ಸಿಟಿ ಬಸ್ ಚಾಲಕ ಸಂದೀಪ್ ಎಂದು ಗುರುತಿಸಲಾಗಿದೆ. ಇವರು ಮೂಲತಃ ಸಾಗರ ತಾಲೂಕಿನವರಾಗಿದ್ದು, ಅವಿವಾಹಿತರಾಗಿದ್ದಾರೆ. ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಂಬಾಗಿಲು-ಕಲ್ಸಂಕ ರಸ್ತೆಯಲ್ಲಿ ಏಕಮುಖ ಸಂಚಾರದ ವ್ಯವಸ್ಥೆ ಮಾಡಲಾಗಿದೆ.

ಕಲ್ಸಂಕ ಕಡೆಯಿಂದ ಅಂಬಾಗಿಲು ಕಡೆಗೆ ತೆರಳುತ್ತಿದ್ದ ಸಂದೀಪ್ ಹಾಗೂ ಅಂಬಾಗಿಲು ಕಡೆಯಿಂದ ಕಲ್ಸಂಕ ಕಡೆಗೆ ತೆರಳುತ್ತಿದ್ದ ದೇವೆಂದ್ರ ಶೆಣೈ ಎಂಬವರ ದ್ವಿಚಕ್ರ ವಾಹನ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, ಇದರಿಂದ ಇಬ್ಬರು ಸವಾರರು ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ.

ಸಂದೀಪ್ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದರೆ, ದೇವೇಂದ್ರ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ರಭಸಕ್ಕೆ ಎರಡು ಬೈಕ್‌ಗಳು ಜಖಂಗೊಂಡಿವೆ. ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!