ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಅಂಬಾಗಿಲು ಪೆರಂಪಳ್ಳಿ ಕ್ರಾಸ್ ಬಳಿಯ ನ್ಯೂ ಜಯಲಕ್ಷ್ಮೀ ಸ್ಟೀಲ್ಸ್ ಎದುರುಗಡೆ ಸಂಭವಿಸಿದೆ.
ಮೃತನನ್ನು ಉಡುಪಿ ಸಿಟಿ ಬಸ್ ಚಾಲಕ ಸಂದೀಪ್ ಎಂದು ಗುರುತಿಸಲಾಗಿದೆ. ಇವರು ಮೂಲತಃ ಸಾಗರ ತಾಲೂಕಿನವರಾಗಿದ್ದು, ಅವಿವಾಹಿತರಾಗಿದ್ದಾರೆ. ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಂಬಾಗಿಲು-ಕಲ್ಸಂಕ ರಸ್ತೆಯಲ್ಲಿ ಏಕಮುಖ ಸಂಚಾರದ ವ್ಯವಸ್ಥೆ ಮಾಡಲಾಗಿದೆ.
ಕಲ್ಸಂಕ ಕಡೆಯಿಂದ ಅಂಬಾಗಿಲು ಕಡೆಗೆ ತೆರಳುತ್ತಿದ್ದ ಸಂದೀಪ್ ಹಾಗೂ ಅಂಬಾಗಿಲು ಕಡೆಯಿಂದ ಕಲ್ಸಂಕ ಕಡೆಗೆ ತೆರಳುತ್ತಿದ್ದ ದೇವೆಂದ್ರ ಶೆಣೈ ಎಂಬವರ ದ್ವಿಚಕ್ರ ವಾಹನ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, ಇದರಿಂದ ಇಬ್ಬರು ಸವಾರರು ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ.
ಸಂದೀಪ್ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದರೆ, ದೇವೇಂದ್ರ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ರಭಸಕ್ಕೆ ಎರಡು ಬೈಕ್‌ಗಳು ಜಖಂಗೊಂಡಿವೆ. ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…