ಹೆರಿಗೆಗಾಗಿ ಮಂಗಳೂರು ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಹೋಗುತ್ತಿದ್ದಾಗ ದಾರಿ ಮಧ್ಯೆ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಹೆರಿಗೆಗೆಂದು ಬಂದಿದ್ದ ಬೆಳ್ತಂಗಡಿ ನಗರದ ಸುದೆಮುಗೇರು ನಿವಾಸಿ ಲೀಲಾವತಿ ಎಂಬ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದು. ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲೇ ಹೆರಿಗೆಯಾಗಬೇಕೆಂಬ ಅಭಿಲಾಷೆಯೊಂದಿಗೆ ಅಲ್ಲಿನ ವೈದ್ಯರ ಸೂಚನೆ ಮೇರೆಗೆ ಇಬ್ಬರು ನರ್ಸ್ ಜೊತೆಗೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ತುರ್ತು ವಾಹನದಲ್ಲಿ ವೈದ್ಯರು ಮಂಗಳೂರಿಗೆ ಕಳುಹಿಸಿದ್ದರು.
ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪಿಸುತ್ತಿದ್ದಂತೆ ಮಹಿಳೆಗೆ ವಿಪರೀತ ಹೆರಿಗೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಕಾರ್ಯಪ್ರವರ್ತರಾದ ಸಿಸ್ಟರ್ ಕುಮುದ ಹಾಗೂ ಸಿಸ್ಟರ್ ಸೌಮ್ಯಾ.ಎಸ್ ಗಂಡು ಮಗುವಿಗೆ ಆಂಬ್ಯುಲೆನ್ಸ್ ವಾಹನದೊಳಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ದಿನೇಶ್ ಗೌಡ ಅವರ ಸಮಯಪ್ರಜ್ಞೆಯಿಂದ ಅತ್ಯಂತ ಕಡಿಮೆ ಸಮಯದಿಂದ ಮಂಗಳೂರು ಲೇಡಿಗೋಷನ್ ಆಸ್ಪತ್ರೆಗೆ ತಲುಪಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸದ್ಯ ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…