ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡೂರು ಪೇಟೆಯಲ್ಲಿ ಕಟಿಂಗ್ ಶಾಪ್‌ನಲ್ಲಿ ನಡೆದ ಘಟನೆಯನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಪ್ರಚೋದನೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಶಶಾಂಕ ಭಂಡಾರಿ ಮತ್ತು ಪ್ರಮೋದ ಡಿಸೋಜ ಬಂಧಿತ ಆರೋಪಿಗಳು. ಬಿಹಾರ ಮೂಲದ ಕಾನೂನು ಸಂಘರ್ಷಕ್ಕೊಳಗಾದ ಬಾಲಕನು ಕಂಡೂರು ಪೇಟೆಯಲ್ಲಿರುವ ಕಟಿಂಗ್ ಶಾಪ್‌ನಲ್ಲಿ ಹೇಳಿದ ವಿಷಯವನ್ನು ಕೆಲವರು ವಿಡಿಯೋ ಮಾಡಿ, ಸಾರ್ವಜನಿಕರನ್ನು ಪ್ರಚೋದನೆಗೊಳಿಸಿ ಗಲಾಟೆ ಸೃಷ್ಟಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ಬಾಲಕನ ತಂದೆ ನೀಡಿದ ದೂರಿನಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದೆಡೆ, ಈ ವಿಚಾರಕ್ಕೆ ಸಂಬಂಧಿಸಿ ಕಟಿಂಗ್ ಶಾಪ್ ಎದುರು 20-30 ಜನರು ಗುಂಪುಗೂಡಿ ಬೆದರಿಕೆ ಹಾಕಿರುವ ಬಗ್ಗೆ ಶಾಪ್ ಮಾಲೀಕ ಶಶಾಂಕ ಭಂಡಾರಿ ನೀಡಿದ ದೂರಿನ ಮೇರೆಗೆ ಮತ್ತೊಂದು ಪ್ರಕರಣವೂ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 20-30 ಜನರನ್ನು ಗುರುತಿಸಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…