ಕೇರಳದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಕೆಂಪುಕಲ್ಲುಗಳನ್ನು ಸಾಗಿಸುತ್ತಿದ್ದ 2 ಲಾರಿಗಳನ್ನು ವಿಟ್ಲ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದೆ.
ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕ ರಾಮಕೃಷ್ಣರವರಿಗೆ ಕೇರಳ ಕಡೆಯಿಂದ ಪೆರುವಾಯಿ ಮಾರ್ಗವಾಗಿ ಲಾರಿಗಳಲ್ಲಿ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಕರ್ನಾಟಕ್ಕೆ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸಿಬ್ಬಂದಿಗಳೊಂದಿಗೆ ಕಾರ್ಯಚರಣೆ ಮಾಡಿದಾಗ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಬೆರಿಪದವು ಎಂಬಲ್ಲಿ ಕೆಂಪುಕಲ್ಲುಗಳನ್ನು ತುಂಬಿಸಿಕೊಂಡು ಬರುತ್ತಿದ್ದ 2 ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.
ಚಾಲಕರಾದ ವಿಟ್ಲ ನಿವಾಸಿಗಳಾದ ಸಾಧಿಕ್ ಮೊಹಮ್ಮದ್ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ವಿಚಾರಣೆ ನಡೆಸಿದಾಗ ಕೆಂಪು ಕಲ್ಲುಗಳನ್ನು ಕೇರಳದ ಧರ್ಮತ್ತಡ್ಕದಿಂದ ವೇಣು ಎಂಬವರು ತುಂಬಿಸಿ ಕಳುಹಿಸಿಕೊಟ್ಟಿರುವುದಾಗಿ ಹಾಗೂ ಈ ಬಗ್ಗೆ ಯಾವುದೇ ಪರವಾನಿಗೆ ಅಥವಾ ದಾಖಲಾತಿಗಳು ಇರುವುದಿಲ್ಲ ಎಂದು ತಿಳಿಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…