ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು: ತಡೆಗೋಡೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಭೂಮಿ ಪೂಜೆ.

ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರದ ರೋಹಿಣಿ ಮನೆ ಬಳಿಯಿಂದ ಹರಿಣಾಕ್ಷಿ ಮನೆ ತನಕ 75 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಭೂಮಿ ಪೂಜೆ ನಡೆದಿದೆ.

ನಂತರ ಮಾತನಾಡಿದ ಶಾಸಕರು, ಇದು ಬಹಳಷ್ಟು ವರ್ಷಗಳಿಂದ ಬೇಡಿಕೆಯಿದ್ದ ಅತೀ ಅಗತ್ಯ ಕಾಮಗಾರಿಯಾಗಿದೆ. ಈ ಪ್ರದೇಶವು ಎತ್ತರ ತಗ್ಗು ಇರುವುದರಿಂದ ರಸ್ತೆ ನಿರ್ಮಾಣ ಬಹು ದೊಡ್ಡ ಸವಾಲು. ದಿನನಿತ್ಯದ ಕೆಲಸಗಳಿಗೆ ಇಲ್ಲಿನ ಜನರು ತೀವ್ರ ತೊಂದರೆ ಅನುಭವಿಸುತ್ತಿರುವುದು ನನ್ನ ಗಮನದಲ್ಲಿದೆ. ಮೊದಲು ಇಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಿಸಿ ನಂತರ ರಸ್ತೆ ನಿರ್ಮಿಸುವ ಬಗ್ಗೆ ಯೋಜನೆ ಹಾಕಿಕೊಳ್ಳಲಾಗಿದೆ.

ಸ್ಥಳೀಯ ಬಿಜೆಪಿ ಮುಖಂಡರಾದ ಚಂದ್ರಶೇಖರ ಬಜಾಲ್‌ರವರ ವಿಶೇಷ ಮನವಿ ಮೇರೆಗೆ ಈ ಕಾಮಗಾರಿ ನಡೆಯುತ್ತಿದ್ದು, ಈ ಹಿಂದಿನ 2022-23 ನೇ ಸಾಲಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರುಗೊಂಡಿರುವ ಕಾಮಗಾರಿಯಾಗಿದೆ ಎಂದಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಪ್ರಮುಖರಾದ ಪ್ರವೀಣ್ ನಿಡ್ಡೇಲ್, ಸುಕೇಶ್, ಸುರೇಶ್ ರಾವ್, ಶಿವಾನಂದ, ರಹೀಮ್, ಲಕ್ಷ್ಮಿ, ಸರಸ್ವತಿ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!