ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರದ ರೋಹಿಣಿ ಮನೆ ಬಳಿಯಿಂದ ಹರಿಣಾಕ್ಷಿ ಮನೆ ತನಕ 75 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಭೂಮಿ ಪೂಜೆ ನಡೆದಿದೆ.
ನಂತರ ಮಾತನಾಡಿದ ಶಾಸಕರು, ಇದು ಬಹಳಷ್ಟು ವರ್ಷಗಳಿಂದ ಬೇಡಿಕೆಯಿದ್ದ ಅತೀ ಅಗತ್ಯ ಕಾಮಗಾರಿಯಾಗಿದೆ. ಈ ಪ್ರದೇಶವು ಎತ್ತರ ತಗ್ಗು ಇರುವುದರಿಂದ ರಸ್ತೆ ನಿರ್ಮಾಣ ಬಹು ದೊಡ್ಡ ಸವಾಲು. ದಿನನಿತ್ಯದ ಕೆಲಸಗಳಿಗೆ ಇಲ್ಲಿನ ಜನರು ತೀವ್ರ ತೊಂದರೆ ಅನುಭವಿಸುತ್ತಿರುವುದು ನನ್ನ ಗಮನದಲ್ಲಿದೆ. ಮೊದಲು ಇಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಿಸಿ ನಂತರ ರಸ್ತೆ ನಿರ್ಮಿಸುವ ಬಗ್ಗೆ ಯೋಜನೆ ಹಾಕಿಕೊಳ್ಳಲಾಗಿದೆ.
ಸ್ಥಳೀಯ ಬಿಜೆಪಿ ಮುಖಂಡರಾದ ಚಂದ್ರಶೇಖರ ಬಜಾಲ್‌ರವರ ವಿಶೇಷ ಮನವಿ ಮೇರೆಗೆ ಈ ಕಾಮಗಾರಿ ನಡೆಯುತ್ತಿದ್ದು, ಈ ಹಿಂದಿನ 2022-23 ನೇ ಸಾಲಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರುಗೊಂಡಿರುವ ಕಾಮಗಾರಿಯಾಗಿದೆ ಎಂದಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಪ್ರಮುಖರಾದ ಪ್ರವೀಣ್ ನಿಡ್ಡೇಲ್, ಸುಕೇಶ್, ಸುರೇಶ್ ರಾವ್, ಶಿವಾನಂದ, ರಹೀಮ್, ಲಕ್ಷ್ಮಿ, ಸರಸ್ವತಿ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…