ಪ್ರಧಾನಿ ಮೋದಿ ಅಮೆರಿಕಕ್ಕೆ ಶರಣಾಗಿದ್ದಾರೆ ಎಂದು ಆರೋಪಿಸಿದ, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಬಾನು ಚಿಬ್ ಬಂಧನ ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಪ್ರತಿಭಟನೆ ನಡೆದಿದೆ.

ಮಂಗಳೂರು ನಗರದ ಲಾಲ್‌ಬಾಗ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ನಡೆದ ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ವಹಿಸಿದ್ದರು. ಇನ್ನು ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ವಕ್ತಾರ ಎಂ.ಜಿ.ಹೆಗಡೆ, ರಾಜ್ಯ ಯುವ ಕಾಂಗ್ರೆಸ್ ನಾಯಕ ಸುಹೈಲ್ ಕಂದಕ್, ಡೆನ್ನಿಸ್ ಡಿಸಿಲ್ವ, ಸುಹಾನ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.



