ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಬೋಟೊಂದು ನೀರು ತುಂಬಿ ಮುಳುಗಡೆ ಯಾದ ಘಟನೆ ಕುಂದಾಪುರ ಹಾಗೂ ಗಂಗೊಳ್ಳಿ ಮಧ್ಯದ ಸಮುದ್ರದಲ್ಲಿ ಸಂಭವಿಸಿದ್ದು, ಬೋಟಿನಲ್ಲಿದ್ದ ಐವರು ಮೀನುಗಾರರನ್ನು ಮತ್ತೊಂದು ಬೋಟಿನ ಮೀನುಗಾರರು ರಕ್ಷಿಸಿದ್ದಾರೆ.
ಬೋಟಿನಲ್ಲಿದ್ದ ಮೀನುಗಾರರಾದ ಕುಮಟಾ ಮೂಲದ ಪ್ರಕಾಶ್, ರಂಜಿತ್, ರಾಘವೇಂದ್ರ, ರಾಮ ಹಾಗೂ ಶ್ರೀನಿವಾಸ ಪಾರಾದವರು. ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಕೆಮ್ಮಣ್ಣಿನ ನಾಗರಾಜ್ ಪುತ್ರನ್ ಅವರ ಶ್ರೀದುರ್ಗಾಪರಮೇಶ್ವರಿ ಬೋಟಿನ ಅಡಿಭಾಗಕ್ಕೆ ಸಮುದ್ರದಲ್ಲಿ ಯಾವುದೋ ವಸ್ತು ತಾಗಿ, ಎಂಜಿನಿನ ಅಡಿ ಭಾಗದಲ್ಲಿ ನೀರು ಒಳ ಬರಲು ಆರಂಭಿಸಿತ್ತು. ನೀರು ತುಂಬಿ ಬೋಟಿನ ಎಂಜಿನ್ ಸ್ಥಗಿತಗೊಂಡಿದೆ. ಕೂಡಲೇ ಬೋಟಿನಲ್ಲಿದ್ದವರು ನೀರು ಖಾಲಿ ಮಾಡಲು ಪ್ರಯತ್ನಿಸಿದರೂ ಆಗಲಿಲ್ಲ. ಅನಂತರ ಸಹಾಯಕ್ಕಾಗಿ ಮಲ್ಪೆ ಬಂದರಿನಿಂದ ಶ್ರೀಕೃಷ್ಣ ಬೋಟಿನವರು ಹಾಗೂ ಕೋಸ್ಟ್ ಗಾರ್ಡ್ ಬಂದು ಬೋಟಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಬಳಿಕ ಬೋಟನ್ನು ಶ್ರೀ ಕೃಷ್ಣ ಬೋಟಿನವರು ಹಗ್ಗ ಕಟ್ಟಿ ಎಳೆದು ಗಂಗೊಳ್ಳಿ ಬಂದರಿನಿAದ ಸುಮಾರು 8-9 ನಾಟಿಕಲ್ ಮೈಲು ದೂರದಲ್ಲಿ ಎಳೆದುಕೊಂಡು ಬರುವಾಗ ಗಾಳಿ ಹಾಗೂ ಅಲೆಗಳ ಅಬ್ಬರದಿಂದಾಗಿ ಹಗ್ಗ ತುಂಡಾಗಿ, ಬೋಟು ಸಂಪೂರ್ಣ ಮುಳುಗಡೆಯಾಗಿದೆ. ಇದರಿಂದ ಅಂದಾಜು 60-65 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಮಾಲಕ ನಾಗರಾಜ್ ಪುತ್ರನ್ ದೂರಿನಲ್ಲಿ ತಿಳಿಸಿದ್ದಾರೆ. ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣದ ದೂರು ದಾಖಲಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…