ಮಂಗಳೂರು ನಗರದ ಕುಂಟಿಕಾನ ಪರಿಸರದಲ್ಲಿ ಶಾಲಾ ಮಕ್ಕಳ ಅಪಹರಣ ನಡೆಯುತ್ತಿದೆ ಎಂಬ ಆಧಾರರಹಿತ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ವಾಯ್ಸ್ ಮೆಸೇಜ್ ಹರಿಬಿಟ್ಟಿದ್ದ ಮಹಿಳೆಯನ್ನು ಪೊಲೀಸರು ಪತ್ತೆಹಚ್ಚಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆಕೆ, “ರಸ್ತೆಯಲ್ಲಿ ಕೆಲವು ವಿದ್ಯಾರ್ಥಿಗಳು ಮಾತನಾಡಿಕೊಳ್ಳುತ್ತಿದ್ದ ವಿಷಯವನ್ನು ಕೇಳಿಸಿಕೊಂಡು ನಾನು ಈ ಆಡಿಯೋ ಮಾಡಿದ್ದೆ” ಎಂದು ಹೇಳಿಕೆ ನೀಡಿದ್ದಾರೆ. ಅಂದರೆ, ಆಕೆ ಘಟನೆಯನ್ನು ಪ್ರತ್ಯಕ್ಷವಾಗಿ ಕಂಡಿಲ್ಲ, ಬದಲಿಗೆ ಕೇವಲ ಕೇಳಿಬಂದ ಮಾತಿನ ಆಧಾರದ ಮೇಲೆ ಆಡಿಯೋ ಹಂಚಿಕೊAಡಿದ್ದಾರೆ ಎಂದು ಕಮಿಶನರ್ ಹೇಳಿದ್ದಾರೆ. “ಸಾರ್ವಜನಿಕರು ಅನಗತ್ಯವಾಗಿ ಭಯಭೀತರಾಗುವ ಅಗತ್ಯವಿಲ್ಲ. ಕಿಡ್ನಾಪ್ ಹೆಸರಿನಲ್ಲಿ ಹರಡುತ್ತಿರುವ ಇಂತಹ ನಕಲಿ ಸಂದೇಶಗಳನ್ನು ಶೇರ್ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…