ಜನ ಮನದ ನಾಡಿ ಮಿಡಿತ

Advertisement

ಗದಗ: ಕಾರು-ಬೈಕ್ ಮುಖಾಮುಖಿ ಡಿ*ಕ್ಕಿ; ಮೂವರು ಯುವಕರು ಸ್ಥಳದಲ್ಲೇ ಸಾ*ವು!

ಕಾರು ಮತ್ತು ಬೈಕ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮೇವುಂಡಿ ಬಳಿ ನಡೆದಿದೆ.

ಮುಂಡರಗಿ ತಾಲೂಕಿನ ಜಂತ್ತಿ ಶಿರೂರ ಗ್ರಾಮದ ನಿವಾಸಿಗಳಾದ, ಶಿವಪ್ಪ ಪಾಟ್ಲಿ, ಮುತ್ತಪ್ಪ ಮುದುಗಣ್ಣವರ್ ಮತ್ತು ಆನಂದ ಲಕ್ಷ್ಮೀಶ್ವರಮಠ ಮೃತಪಟ್ಟವರು. ಮುಂಡರಗಿ ಬಳಿಯ ಮೇವುಂಡಿ – ಬರದೂರು ಗ್ರಾಮಗಳ ಮಧ್ಯದ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ. ಮುಂಡರಗಿ ಪಟ್ಟಣದಿಂದ ಒಂದೇ ಬೈಕ್‌ನಲ್ಲಿ ಮೂವರು ಯುವಕರು ಜಂತ್ತಿ ಗ್ರಾಮಕ್ಕೆ ತೆರಳುತ್ತಿದ್ದಾಗ, ಎದುರಿನಿಂದ ಬರುತ್ತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರರ ಅತಿವೇಗ ಮತ್ತು ಬೇಜವಾಬ್ದಾರಿ ಚಾಲನೆಯೇ ಅಪಘಾತಕ್ಕೆ ಕಾರಣ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮುತ್ತಪ್ಪ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮುಂಡರಗಿ ಪೊಲೀಸರು ಪರಿಶೀಲನೆ ನಡೆಸಿ, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!