ಬಂಟ್ವಾಳ ತಾಲೂಕಿನ ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿಯಲ್ಲಿ ಕಾರ್ಯಾಚರಿಸುತ್ತಿದ್ದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ರಾಸಾಯನಿಕ ಮಿಶ್ರಣದಲ್ಲಿ ಸಮಸ್ಯೆಯಾಗಿ ಸ್ಫೋಟ ಸಂಭವಿಸಿದ ಘಟನೆ ನಡೆದಿದೆ.
ಕಳೆದ ಹಲವಾರು ವರುಷಗಳಿಂದ ಅಬ್ದುಲ್ ಗಫೂರ್ ಎಂಬವರು ಶೆಡ್ ನಿರ್ಮಿಸಿ ಸಿಡಿಮದ್ದು ತಯಾರಿಕೆ ಮಾಡುತ್ತಿದ್ದರು. ಈ ಘಟಕದಲ್ಲಿ ಸಿಡಿಮದ್ದಿಗೆ ಬೇಕಾದ ರಾಸಾಯನಿಕವನ್ನು ಮಿಶ್ರಣ ಮಾಡಿ ಕಾರ್ಮಿಕರು ಸಂಜೆಯ ಕಾಫಿ ಕುಡಿಯುವ ಸಲುವಾಗಿ ತೆರಳುತ್ತಿದ್ದ ಸಂದರ್ಭ ಏಕಾಏಕಿ ಘಟಕ ಸ್ಫೋಟಗೊಂಡಿದೆ. ಸ್ಪೋಟದ ತೀವ್ರತೆಗೆ 5 ಸೆಂಟ್ಸ್ ಜಾಗ ಸಂಪೂರ್ಣ ಹಾನಿಯಾಗಿದೆ.
ಆದರೆ ಯಾವುದೇ ಜೀವ ಹಾನಿಯಾಗಿಲ್ಲ. ಘಟನೆ ನಡೆದ ಕೂಡಲೇ ನೀರು ಹಾಕಿ ಬೆಂಕಿ ಆರಿಸುವ ಕಾರ್ಯವನ್ನು ಮಾಡಲಾಯಿತು. ಘಟನೆಯಿಂದಾಗಿ ಆಸುಪಾಸಿನ ಕೆಲವು ಮನೆಗಳಿಗೆ ಹಾನಿಯಾಗಿರುವುದಾಗಿ ಮಾಹಿತಿ ಲಭಿಸಿದೆ. ಘಟನಾ ಸ್ಥಳಕ್ಕೆ ಕಂದಾಯ ನಿರೀಕ್ಷಕ ರವಿ, ವಿಟ್ಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ, ವಿಟ್ಲ ಠಾಣಾ ಎಸ್.ಐ. ರಾಮಕೃಷ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಘಟಕದಲ್ಲಿ ಪಟಾಕಿ ಸಿಡಿದು ಭಾರೀ ಸ್ಫೋಟಗೊಂಡ ಘಟನೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…